ಬಳ್ಳಾರಿಯ ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯಿಂದ ಪ್ರಥಮ ಬಿಎಸ್‌ಸಿ(ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಮಹಿಳೆಯರ ಉಡುಪು ವಿನ್ಯಾಸ-04 ತಿಂಗಳ ಅವಧಿ.
ಹೊಲಿಗೆ ಯಂತ್ರ ತರಬೇತಿ-45 ದಿನ ಉಚಿತ ತರಬೇತಿ ಮತ್ತು ವಿದ್ಯಾರ್ಥಿ ವೇತನ ಸಹಿತ ವೃತ್ತಿಪರ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿಯ ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೊಮಾ ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿದ್ದು, ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಿ: ತಹಶೀಲ್ದಾರ್ ಅನಿಲ್ ಕುಮಾರ್
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‌ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.8088227249, 9741264655, 9844862576, 9844474235, 8123126127ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.