ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸವರ್ಣೀಯರು ಗೊಂಡ(ಕುರುಬ) ಸಮುದಾಯದವರನ್ನು ಬಹಿಷ್ಕರಿಸಿದ ಹಿನ್ನೆಲೆ ಕಲ್ಯಾಣ ಕರ್ನಾಟಕ ಗೊಂಡ ಸಮಾಜದ ಒಕ್ಕೂಟ ಧರಣಿ ಸತ್ಯಾಗ್ರಹ ನಡೆಸಿದೆ. ಬಳಿಕ ತಾಲೂಕು ಆಡಳಿತ ಖಾನಾಪುರ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಎರಡೂ ಸಮುದಾಯಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಇರುವಂತೆ ತಿಳಿಸಿದೆ.
“ಇನ್ನು ಮುಂದೆ ಇಂತಹ ಘಟನೆ ನಡೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಡಿವೈಎಸ್‌ಪಿ ಗೋಪಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ
ಆಳಂದ ತಹಶೀಲ್ದಾರ್ ಅಣ್ಣರಾವ್ ಪಾಟೀಲ್, ಡಿವಎಸ್‌ಪಿ ಗೋಪಿ, ಸಿಪಿಐ, ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಿಡಿಒ ಸೇರಿದಂತೆ ಗೊಂಡ ಸಮಾಜದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಅಂಬರೀಶ ಮಲ್ಲೇಶಿ, ಸಂಸ್ಥಾಪಕ ಕಾರ್ಯದರ್ಶಿ ಬಾಲಾಜಿ ಜಬಾಡೆ, ಆಕಾಶ್ ದೇಗಾಂವ್, ಗ್ರಾಮದ ಕುರುಬ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಇದ್ದರು.