ವಿಜಯಪುರ | ʼಅಂಬೇಡ್ಕರ್ ಕಪ್ʼ ಕ್ರಿಕೆಟ್ ಟೂರ್ನಮೆಂಟ್; ನೋಂದಣಿಗೆ ಮಾ.26 ಕೊನೆಯ ದಿನ

Date:

Advertisements

ಡಾ. ಬಾಬಾಸಾಹೇಬರ ಅಂಬೇಡ್ಕರ್ ಜಯಂತಿ ನಿಮಿತ್ಯವಾಗಿ‌ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದಿಂದ ನಾಲ್ಕು ದಿನದ ʼಅಂಬೇಡ್ಕರ್ ಕಪ್ʼ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಜಿಲ್ಲೆಯ ಕಾಲೇಜು ಮತ್ತು ವಸತಿ ನಿಲಯ ವಿದ್ಯಾರ್ಥಿಗಳಿಗೆ ಈ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಲು ಮುಕ್ತ ಅವಕಾಶ ಇರಲಿದೆ. ಫೈನಲ್ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ₹15,000, ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಡುವ ತಂಡಕ್ಕೆ ದ್ವಿತೀಯ ಬಹುಮಾನ ₹10,000 ಬಹುಮಾನ ಇರಲಿದೆ” ಎಂದು ತಿಳಿಸಿದರು.

“ಭಾಗವಹಿಸುವರು ಕಡ್ಡಾಯವಾಗಿ ನೋಂದಣಿ ಪತ್ರದಲ್ಲಿ ಕಾಲೇಜು/ವಸತಿ ನಿಲಯ ಮುಖ್ಯಸ್ಥರ ಪರವಾನಗಿ ಪತ್ರ ತರಬೇಕು. ಮಾರ್ಚ್‌ 26ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ₹1,100 ಪ್ರವೇಶ ಶುಲ್ಕ ಇರಲಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

“ಪಂದ್ಯಾವಳಿಗಳು ಜಿಲ್ಲಾ ಪಂಚಾಯತ್ ಆವರಣದಲ್ಲಿ ಇರುವ ಮೈದಾನದಲ್ಲಿ ನಡೆಯಲಿದೆ. ಭಾಗಿಯಾಗುವ ಎಲ್ಲ ಕ್ರೀಡಾಪಟುಗಳಿಗೆ ಕ್ರೀಡೆಯಲ್ಲಿ ಭಾಗವಹಿಸಿದ ಪ್ರಮಾಣ ಪತ್ರ ನೀಡಲಾಗುಹುದು. ಹೆಚ್ಚಿನ ಮಾಹಿತಿಗಾಗಿ 9739396446, 8088160436, 8431626548ಕ್ಕೆ ಸಂಪರ್ಕಿಸಬಹುದು” ಎಂದು ಅಕ್ಷಯ್ ಕುಮಾರ್ ಅಜಮನಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X