ಮಂಡ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿವಿ ಸ್ಥಾಪನೆಗೆ ಹಸಿರು ನಿಶಾನೆ

Date:

Advertisements

ಉಭಯ ಸದನಗಳಲ್ಲಿ 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಈ ಮೂಲಕ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಚಾಲನೆ ಸಿಕ್ಕಂತಾಗಿದೆ.

2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ವಿಧೇಯಕವನ್ನು ಉಭಯ ಸದನಗಳಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಮಂಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರವಾಗಿ ಬಂದಿದ್ದ ವಿಧೇಯಕವನ್ನು ಗುರುವಾರ ವಿಧಾನಪರಿಷತ್‌ಮಲ್ಲಿ ಅಧಿಕೃತವಾಗಿ ಅಂಗೀಕಾರಗೊಂಡಿದೆ.

ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿತ್ತು. ಈಗ ಉಭಯ ಸದನಗಳಲ್ಲಿ ತಿದ್ದುಪಡಿ ವಿಧೇಯಕ ಅಂಗೀಕಾರ ಆಗುವ ಮೂಲಕ ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ.

Advertisements

2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ ಪ್ರಾರಂಭಕ್ಕೆ ಇದೀಗ ಹಸಿರು ನಿಶಾನೆ ದೊರಕಿದೆ.

ಮಂಡ್ಯ ಕೃಷಿ ವಿಶ್ವವಿದ್ಯಾಲಯ: ನನ್ನ ಕನಸು ಸಾಕಾರಗೊಂಡ ಕ್ಷಣ!

“ಈ ದಿನ ನನ್ನ ಜೀವನದ ಅತ್ಯಂತ ಸಂಭ್ರಮದ ಕ್ಷಣ. ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳು 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ ನೀಡಿದ್ದು ನನಗೆ ಅಪಾರ ಹರ್ಷ ಮತ್ತು ಆನಂದವನ್ನು ಉಂಟುಮಾಡಿದೆ. ನನ್ನ ಜನ್ಮಭೂಮಿ, ನನ್ನ ಊರು ಮಂಡ್ಯ – ಕಾವೇರಿ ಜಲಾನಯನ ಪ್ರದೇಶದಲ್ಲಿ ಇರುವ ಈ ಪುಣ್ಯಭೂಮಿಯು ಕೃಷಿಕರ ಕಲ್ಪವೃಕ್ಷವಾಗಬೇಕು ಎಂಬುದು ನನ್ನ ಜೀವನದ ಮಹತ್ವದ ಕನಸಾಗಿತ್ತು. ಆ ಕನಸು ಇಂದು ನನಸಾಗುವ ಹಾದಿಯಲ್ಲಿ ಸಾಗುತ್ತಿದೆ” ಎಂದು ಸಚಿವ ಚಲುವರಾಯಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಕೃಷಿ ಪರಂಪರೆಗೆ ಹೆಸರಾಗಿರುವ ನಮ್ಮ ಮಂಡ್ಯ ಜಿಲ್ಲೆಯಿಂದ ಪ್ರಪ್ರಥಮ ಬಾರಿಗೆ ಕೃಷಿ ಸಚಿವನಾಗಿ ಆಯ್ಕೆಯಾಗಿ ಇಂತಹ ಒಂದು ಸತ್ಕಾರ್ಯ ಮಾಡುವ ಸದವಕಾಶ ದೊರಕಿರುವುದು ನನ್ನ ಸೌಭಾಗ್ಯ. ನಾಡಿನ ಅನ್ನದಾತರ ಶ್ರೇಯೋಭಿವೃದ್ಧಿಗೆ ನನ್ನ ಶ್ರಮ ನಿರಂತರವಾಗಿರಲಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X