ಪರೀಕ್ಷೆಯಲ್ಲಿ ಅನುತ್ತೀರ್ಣ ಹೊಂದುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿ ಬೋವಿ ಕಾಲೊನಿ ಗ್ರಾಮದಲ್ಲಿ ನಡೆದಿದೆ.
ಅತ್ಮಹತ್ಯೆ ಮಾಡಿಕೊಂಡ ಮೃತ ವಿದ್ಯಾರ್ಥಿನಿ ವರ್ಷಿಣಿ(15), ಅರಸೀಕೆರೆ ತಾಲೂಕು ಬಾಣಾವರ ಹೋಬಳಿಯ ಖಾಸಗಿ ಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ವರ್ಷಿಣಿ ಅನುತ್ತೀರ್ಣ ಆಗುತ್ತೇನೆಂಬ ಭಯದಿಂದ ಮನನೊಂದು ಶುಂಠಿ ಬೆಳೆಗೆ ಸಿಂಪಡಿಸಲು ತಂದಿದ್ದ, ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿದ್ದೀರಾ?http://*ಚಿಕ್ಕಮಗಳೂರು l ಶಾಸಕರಿಗೆ ಪದೆ ಪದೇ ಮನವಿ ಮಾಡಿದರೂ, ಡಾಂಬರೀಕರಣ ಆಗದ ರಸ್ತೆ*
ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.