ಬುಲೆರೋ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಐದು ಮಂದಿ ಮಹಿಳಾ ಕಾರ್ಮಿಕರು ಗಾಯಗೊಂಡ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಮುರಾನ್ ಪುರ ಬಸ್ ನಿಲ್ದಾಣ ಬಳಿ ನಡೆದಿದೆ.
ಮೆಣಸಿನಕಾಯಿ ತೆಗಿಯಲೆಂದು ಹತ್ತಾರು ಮಹಿಳೆಯರು ಕಲ್ಲೂರಿನಿಂದ ಗಬ್ಬೂರಿಗೆ ಬುಲೆರೋ ವಾಹನದಲ್ಲಿ ಸಾಗುತ್ತಿದ್ದರು. ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಡಿಕ್ಕಿಯಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಪರೀಕ್ಷೆಯಲ್ಲಿ ಅನುತ್ತೀರ್ಣ ಭಯದಿಂದ ವಿದ್ಯಾರ್ಥಿನಿ ಅತ್ಮಹತ್ಯೆ
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.