ಹವಾಮಾನ | ಬಹುತೇಕ ಜಿಲ್ಲೆಗಳಿಗೆ ಈ ವರ್ಷ ಮುಂಗಾರು ವೇಳೆ ವಾಡಿಕೆಗಿಂತ ಅಧಿಕ ಮಳೆ

Date:

Advertisements

ಪ್ರಸ್ತುತ ವರ್ಷದ ಮುಂಗಾರು ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಆದರೆ, ಜೂನ್ನಿಂದ ಸೆಪ್ಟೆಂಬರ್ವರೆಗಿನ ಮಾನ್ಸೂನ್ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ ” ಎಂದು ವಿವರಿಸಿದರು.

Advertisements

ಮುಂದುವರೆದು, “ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ವಾಡಿಕೆಯ ಮಳೆ ನಿರೀಕ್ಷಿಸಬಹುದು. ಅಲ್ಲದೆ, ಭಾರತ ಹವಮಾನ ಇಲಾಖೆಯ ತಾಪಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಉತ್ತರ ಒಳನಾಡು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನದ ಸಂಭವನೀಯತೆ ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆಗಳಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ಉಳಿದ ಇತರ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುವ ಸಾಧ್ಯತೆಯಿದೆ” ಎಂದು ಅಧಿಕಾರಿಗಳು ತಿಳಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ

ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 422.11 ಟಿ.ಎಂ.ಸಿ ನೀರಿನ ಸಂಗ್ರಹಣೆಯಿದ್ದು, ಕಳೆದ ಸಾಲಿನ ಇದೇ ಸಮಯದಲ್ಲಿ 280.02 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು,” ನೀರಾವರಿಗಿಂತ (ಬೇಸಿಗೆ ಬೆಳೆಗಳು) ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ ದಿನಗಳಲ್ಲಿ ನೀರಿನ ಬಿಡುಗಡೆಗಳು ಹೆಚ್ಚಿನ ತಾಪಮಾನವು ನೀರಿನ ನಷ್ಟಕ್ಕೆ ಕಾರಣವಾಗುತ್ತದೆಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ನೀರಿನ ಬಿಡುಗಡೆಯ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಮುಂಬರುವ ತಿಂಗಳುಗಳಲ್ಲಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಎಂಬ ಕುರಿತು ಮುಂದಿನ ಸಭೆಯಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಯಾವೆಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ

ಪ್ರಸ್ತುತ ರಾಜ್ಯದ 12 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕಲಬುರಗಿ, ಚಾಮರಾಜನಗರ, ಯಾದಗಿರಿ, ಉತ್ತರಕನ್ನಡ ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ 30 ತಾಲ್ಲೂಕುಗಳ ವ್ಯಾಪ್ತಿಯ 115 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ದಕ್ಷಿಣ ಕನ್ನಡ ಮತ್ತು ಕೋಲಾರ ಜಿಲ್ಲೆಗಳ 8 ನಗರ ಸ್ಥಳೀಯ ಸಂಸ್ಥೆಗಳ 72 ವಾರ್ಡ್ಗಳಲ್ಲಿ ಟ್ಯಾಂಕರ್ ಮತ್ತು ಬೋರ್ವೆಲ್ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.

ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು. ಎಲ್ಲಾ RO ಸ್ಥಾವರಗಳು (RO Plants) ನಿರಂತರ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಹಾಗೂ ಸದರಿ ಸ್ಥಾವರಗಳಿಗೆ 24/7 ನಿರಂತರ ವಿದ್ಯುತ್ ಪೂರೈಸುವುದು. RO ಸ್ಥಾವರಗಳ ತಕ್ಷಣದ ದುರಸ್ತಿಗಾಗಿ ಮತ್ತು ಕುಡಿಯುವ ನೀರು ಸರಬರಾಜು ಸಮಸ್ಯೆಗಳ ಇತ್ಯರ್ಥಕ್ಕಾಗಿ ತ್ವರಿತ ಪರಿಹಾರ ತಂಡಗಳನ್ನು ನಿಯೋಜಿಸುವುದು. ಕುಡಿಯುವ ನೀರಿನ ಕೊರತೆಯ ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಿ ಮತ್ತು ಸಕಾಲಿಕ ತಗ್ಗಿಸುವಿಕೆಗಾಗಿ ಕಾರ್ಯತಂತ್ರಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಸಂಬಂಧಿತ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X