ಬೆಳಗಾವಿ | ಲೋಕಾಪೂರ,ರಾಮದುರ್ಗ,ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು:ರೈಲ್ವೆ ಸಚಿವರ ಭರವಸೆ

Date:

Advertisements

ಈರಣ್ಣ ಕಡಾಡಿ ಹಾಗೂ ಕೇಂದ್ರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಪ್ರಲ್ಲಾದ್‌ ಜೋಶಿ ಅವರು ಗುರುವಾರ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಜಿಲ್ಲೆಯ ಯೋಜನೆಗಳ ಕುರಿತು ನವದೆಹಲಿಯ ಸಚಿವರ ಕಚೇರಿಯಲ್ಲಿ ಚರ್ಚಿಸಿದ್ದು ಲೋಕಾಪೂರ,ರಾಮದುರ್ಗ ಸವದತ್ತಿ ರೈಲು ಮಾರ್ಗದ ಕುರಿತು ನಿರ್ಧಾರ ಪ್ರಕಟಿಸಲಾಗುವದು ಎಂದು ತಿಳಿಸಿದ್ದಾರೆ.

ಕಚೇರಿಯಲ್ಲಿ ಚರ್ಚೆ ನಡೆಸಿದ ಸಂಸದ ಶೆಟ್ಟ‌ರ್, ‘ಲೋಕಾಪೂರ- ರಾಮದುರ್ಗ-ಸವದತ್ತಿ- ಧಾರವಾಡ ನಡುವೆ ನೂತನ ರೈಲು ಮಾರ್ಗ ರಚನೆಯ ಅಂಗವಾಗಿ ಪ್ರಾರಂಭಿಕವಾಗಿ ‘ಮಾರ್ಗ ಸಮೀಕ್ಷೆ’ ನಡೆಸಬೇಕು. ಸವದತ್ತಿಯ ರೇಣುಕಾದೇವಿಯ ಲಕ್ಷಾಂತರ ಭಕ್ತಾದಿಗಳ ಅನುಕೂಲಕ್ಕಾಗಿ ಈ ಮಾರ್ಗ ರಚನೆ ತುಂಬಾ ಅವಶ್ಯಕತೆ ಇದೆ’ ಎಂದು ಕೇಂದ್ರ ಸಚಿವರಲ್ಲಿ ಮನವರಿಕೆ ಮಾಡಿದರು.

ಬೆಳಗಾವಿ ರಹವಾಸಿಗಳ ಅನಕೂಲಕ್ಕಾಗಿ ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ‘ವಂದೇ ಭಾರತ ರೈಲು’ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ಅನುಕೂಲ ಮಾಡಿ ಕೊಡಬೇಕು. ಅನೇಕ ದಿನಗಳಿಂದ ಈ ಬೇಡಿಕೆ ಕನಸಾಗಿಯೇ ಉಳಿದೆ. ಸಾಧ್ಯವಾದಷ್ಟು ಬೇಗ ನೆರವೇರಿಸಿ ಕೊಡಬೇಕು ಎಂದೂ ಸಂಸದ ಮನವಿ ಮಾಡಿದ್ದಾರೆ.

Advertisements

ಬೆಳಗಾವಿ- ಮಿರಜ್ ನಡುವೆ ದಿನನಿತ್ಯ ಸಂಚರಿಸುವ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಪ್ರತಿ ತಿಂಗಳು ವಿಸ್ತರಿಸುತ್ತ ಬರಲಾಗಿದೆ. ಈ ಸೇವೆಯನ್ನು ಕಾಯಂ ಮಾಡುವ ನಿಟ್ಟಿನಲ್ಲಿ ಅಗತ್ಯ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ

ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ...

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

Download Eedina App Android / iOS

X