ಮೈಸೂರು | ಚಾಮುಂಡಿ ಬೆಟ್ಟಕ್ಕೆ ವಾಹನ ಪ್ರವೇಶ ನಿರ್ಬಂಧ

Date:

Advertisements

ಜೂನ್ 23ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡುತ್ತಾರೆ. ಅವ ಓಡಾಟ ಸುಗಮಗೊಳಿಸಲು ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ರಾತ್ರಿವರೆಗೆ ಚಾಮುಂಡಿ ಬೆಟ್ಟಕ್ಕೆ ಎಲ್ಲ ರೀತಿಯ ವಾಹನ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸರು ತಿಳಿಸಿದ್ದಾರೆ.

ಪ್ರವೇಶ ಮತ್ತು ನಿರ್ಗಮನ ಪಾಸ್‌ಗಳನ್ನು ಪಡೆದ ವಿವಿಐಪಿಗಳು, ನಿಯೋಜಿತ ಸರ್ಕಾರಿ ಸಿಬ್ಬಂದಿ ಮತ್ತು ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

“ಜಿಲ್ಲಾಡಳಿತವು ಚಾಮುಂಡಿ ಬೆಟ್ಟದ ತಪ್ಪಲಿನಿಂದ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಬೆಳಿಗ್ಗೆ 3 ರಿಂದ ರಾತ್ರಿ 10 ರವರೆಗೆ ಉಚಿತ ಬಸ್ ಸೇವೆ ಒದಗಿಸಿದೆ. ಲಲಿತ ಮಹಲ್ ಮೈದಾನದ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ತಮ್ಮ ವಾಹನಗಳನ್ನು ನಿಗದಿತ ಜಾಗದಲ್ಲಿ ನಿಲ್ಲಿಸಿ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಬೆಟ್ಟಕ್ಕೆ ತೆರಳಬೇಕು ಮತ್ತು ಹಿಂದಿರುಗಬೇಕು” ಎಂದು ಪೊಲೀಸರು ತಿಳಿಸಿದ್ದಾರೆ.

“ಭಕ್ತರ ನೂಕುನುಗ್ಗಲು ಇರುವುದರಿಂದ ಆಷಾಢ ಶುಕ್ರವಾರದಂದು ಬೆಟ್ಟದ ದೇಗುಲಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಡೆದುಕೊಂಡು ಬೆಟ್ಟ ಹತ್ತಲು ಬಯಸುವ ಭಕ್ತರು ಪೊಲೀಸರು ಸೂಚಿಸಿದ ಜಾಗದಲ್ಲಿ ವಾಹನಗಳನ್ನು ನಿಲ್ಲಿಸಬೇಕು. ಭಕ್ತರಿಗೆ ಅನುಕೂಲವಾಗುವಂತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲುಸಹಾಯ ಕೇಂದ್ರವನ್ನು ತೆರೆಯಲಾಗಿದೆ. ಸಿಸಿಟಿವಿಗಳನ್ನು ಅಳವಡಿಸಲಾಗಿದೆ” ಎಂದು ನಗರ ಪೊಲೀಸ್‌ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X