ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬುಧವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದು ಎಂದರು.
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ; ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಮನವರಿಕೆ