ಚಾಮರಾಜನಗರ | ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣೆ

Date:

Advertisements

ಯುವ ಚೈತನ್ಯ ಯೋಜನೆಯಡಿ ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.

” ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ ಸಂಘಗಳನ್ನು ಸ್ಥಾಪಿಸಿ ಕ್ರೀಡಾಕಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೆಚ್ಚಿನ ಪ್ರಗತಿ ಸಾಧಿಸಿದ ಯುವಕ ಸಂಘಗಳನ್ನು ಸರ್ಕಾರದ ವತಿಯಿಂದ ಯುವ ಚೈತನ್ಯ ಯೋಜನೆಯಡಿ ಪ್ರೋತ್ಸಾಹಿಸಲಾಗುತ್ತಿದೆ. ಯುವಕ ಸಂಘಗಳಿಗೆ ಅಗತ್ಯವಾಗಿರುವ ಕ್ರೀಡಾ ಸಲಕರಣೆಗಳನ್ನು ನೀಡುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯದಲ್ಲಿ ಒಟ್ಟು 200 ಯುವಕ ಸಂಘಗಳನ್ನು ಗುರುತಿಸಲಾಗಿದ್ದು, ಈ ಪೈಕಿ ಜಿಲ್ಲೆಯ 7 ಯುವಕ ಸಂಘಗಳು ಸೇರಿವೆ.

ಆಯ್ಕೆಯಾದ ಸಂಘಕ್ಕೆ ವಾಲಿಬಾಲ್, ನೆಟ್, ಥ್ರೋಬಾಲ್, ಫುಟ್ಬಾಲ್, ಷಟಲ್ ಬ್ಯಾಡ್ಮಿಂಟನ್, ರಾಕೆಟ್ ನೆಟ್, ಕಾಕ್, ಕೇರಂ, ಚೆಸ್ ಸೆಟ್, ಸ್ಕಿಪ್ಪಿಂಗ್ ರೋಪ್ ಕಿಟ್ ನೀಡಲಾಗುತ್ತದೆ. ಗ್ರಾಮೀಣ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಲು ಇದು ಸಹಕಾರಿಯಾಗಲಿದೆ. ವಿತರಿಸಲಾಗಿರುವ ಕ್ರೀಡಾ ಪರಿಕರಗಳನ್ನು ಯುವಕ ಸಂಘಗಳು ಸದ್ಭಳಕೆ ಮಾಡಿಕೊಳ್ಳಬೇಕು. ಯುವಕರು ದೇಹದಾಢ್ಯತೆಯನ್ನು ವೃದ್ಧಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು. ದೈಹಿಕ ಹಾಗೂ ಮಾನಸಿಕ ಆತ್ಮಸೈರ್ಯ ಹೆಚ್ಚಿಸಿಕೊಳ್ಳಬೇಕು ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | 48 ಗ್ರಾಮ ಪಂಚಾಯ್ತಿಗಳು ಕ್ಷಯ ಮುಕ್ತ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ ಸುರೇಶ್, ಫುಟ್ಬಾಲ್ ತರಬೇತುದಾರ ಗೋಪಾಲ್, ಯುವಕ ಸಂಘದ ಅಧ್ಯಕ್ಷ ನಾಗೇಂದ್ರ, ಕಾರ್ಯದರ್ಶಿ ಪ್ರಕಾಶ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X