ಪೊಲೀಸ್ ಎಂದು ಹೇಳಿಕೊಂಡು ರಾಜಧಾನಿ ಬೆಂಗಳೂರಿನ ಯುವಕ ಯುವತಿಯರಿಗೆ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್‌ನನ್ನ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಟಾರ್ಗೆಟ್ ಮಾಡಿಕೊಂಡು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಆರೋಪಿ ಆಸೀಫ್ ಇಬ್ಬರಿಂದ 12 ಗ್ರಾಂ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ ₹10,000 ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದ. ಇದೇ ರೀತಿ ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದೀಗ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು