ಹಾಲಿನ ದರ ಏರಿಕೆ ಪ್ರಸ್ತಾವ | ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದ ಸರ್ಕಾರ: ಬಿಜೆಪಿ ಟೀಕೆ

Date:

ಕೆಎಂಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರಿಗೆ ₹5 ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಲು ಹೊರಟಿದೆ ಎಂದು ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಟಿಎಮ್‌ ಸರ್ಕಾರದಲ್ಲಿ ಈಗಾಗಲೇ ದಿನ ಬಳಕೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ. ಈ ಜನದ್ರೋಹಿ ನಿರ್ಧಾರದಿಂದ ಸರ್ಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ” ಎಂದಿದೆ.

ನಂದಿನಿ ಹಾಲಿನ ದರ ಶೀಘ್ರದಲ್ಲೇ ಹೆಚ್ಚಳವಾಗುವುದೆಂದು ಕರ್ನಾಟಕ ಹಾಲು ಮಾರಾಟ ಮಹಾ ಮಂಡಲದ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಲ್ಲದೆ, ಹಾಲಿನ ದರ 5 ರೂ. ಏರಿಸಲು ಚಿಂತಿಸಿದ್ದು, ಮುಖ್ಯಮಂತ್ರಿಗಳೆದುರು ಈ ಬೇಡಿಕೆ ಇಡಲಾಗಿದೆ. ಎಲ್ಲ ಹಾಲು ಒಕ್ಕೂಟಗಳು 5 ರೂಪಾಯಿ ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಏರಿಕೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಸಹಕಾರಿಯಾಗಲಿದೆ” ಎಂದು ವಿವರಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್‌ ತನ್ನದೇ ಛಾಪು ಮೂಡಿಸಿದೆ: ಮಂಜುನಾಥ ಸುಣಗಾರ

ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ...

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...