ತುಮಕೂರು ಜಿಲ್ಲೆ ಕುಣಿಗಲ್ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ ವಾರ್ಡ್ ಸದಸ್ಯೆ ಮಂಜುಳಾ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದರೆ.. ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್ ಬೆಂಬಲಿಸಿದ್ದ 22ನೇ ವಾರ್ಡ್ ಸದಸ್ಯ ಮಲ್ಲಿಪಾಳ್ಯ ಶ್ರೀನಿವಾಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
23 ಸದಸ್ಯ ಬಲವಿರುವ ಕುಣಿಗಲ್ ಪುರಸಭೆಯಲ್ಲಿ ಕಾಂಗ್ರಸ್ 15, ಬಿಜೆಪಿ 4, ಜೆಡಿಎಸ್ 2 ಹಾಗೂ ಪಕ್ಷೇತರರಾಗಿ ಇಬ್ಬರು ಆಯ್ಕೆಯಾಗಿದ್ದಾರೆ.
ಶಾಸಕ ರಂಗನಾಥ್, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಸೇರಿ 21 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ಕಾಂಗ್ರೆಸ್‌ನ ಜಯಲಕ್ಷ್ಮೀ, ಬಿಜೆಪಿಯ ಕೃಷ್ಣ, ಆನಂದ್ ಕಾಂಬ್ಳಿ ಮತ್ತು ಜಯಮ್ಮ, ಸಂಸದ ಡಾ.ಮಂಜುನಾಥ್ ಗೈರಾಗಿದ್ದರು.
ಇದನ್ನೂ ಓದಿ: ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ
ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮುಖ್ಯಾಧಿಕಾರಿ ಮಂಜುಳಾ ಹಾಜರಿದ್ದರು.