ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

Date:

Advertisements

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ.

ಸೀತಾರಾಮ್ ಗುಂಡಪ್ಪ ಅವರು ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ ಪತ್ರಕರ್ತರಾಗಿದ್ದ ಗುಂಡಪ್ಪನವರ ಮಗ. ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿ ಮುಂಬೈ ವಿಶ್ವವಿದ್ಯಾನಿಲಯದ ಎಂಬಿಎ ಪದವಿಯನ್ನು ಹೊಂದಿದ್ದಾರೆ.

ಸೌದಿ ಅರೇಬಿಯಾ , ದುಬೈ , ಅಬುದಾಬಿ, ಇರಾಕ್, ಕಜಿಕಿಸ್ತಾನ್ ಮುಂತಾದ ಸೌದಿ ರಾಷ್ಟ್ರಗಳ ತೈಲ ಹಾಗೂ ಸ್ವಾಭಾವಿಕ ಅನಿಲ ಕಂಪನಿಗಳಲ್ಲಿ ಅನೇಕ ವರ್ಷಗಳ ಕಾಲ ಇಂಜಿನಿಯರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಭಾರತದ ರಾಜಕೀಯ ಕ್ಷೇತ್ರದಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣ ಅಳಿಸಿ ಹಾಕಬೇಕೆಂಬ ದಿಶೆಯಲ್ಲಿ ಲೋಕಪಾಲ್ ಹೋರಾಟಕ್ಕಾಗಿ ನಡೆದ ಭ್ರಷ್ಟಾಚಾರ ವಿರುದ್ಧ ಭಾರತ (India against corruption) ಜನಾಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯರಾಗಿರುವ ಸೀತಾರಾಮ್ ಗುಂಡಪ್ಪನವರು ಪಕ್ಷದ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

Advertisements

2018 ರಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ 2023ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಸೀತಾರಾಮ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ನೇಮಕವನ್ನು ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಶುಕ್ರವಾರ ಘೋಷಿಸಿದ್ದಾರೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X