ಕರ್ನಾಟಕ ಬಂದ್​ಗೆ ವಾಟಾಳ್‌ ನಾಗರಾಜ್ ಕರೆ, ಶನಿವಾರ ಏನಿರುತ್ತೆ -‌ ಏನಿರಲ್ಲ?

Date:

Advertisements

ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಮತ್ತು ಕನ್ನಡಿಗರ ಮೇಲಿನ ದಬ್ಬಾಳಿಕೆ ಖಂಡಿಸಿ ಶನಿವಾರ (ಮಾ.22) ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ. ಎಂಇಎಸ್​, ಶಿವಸೇನೆ ಪುಂಡಾಟ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಕರ್ನಾಟಕ ಬಂದ್​ ಮಾಡುವ ಸಲುವಾಗಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಪೊಲೀಸ್ ಕಮಿಷನರ್​ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಪೊಲೀಸರು ಅವಕಾಶ ಕೊಟ್ಟಿಲ್ಲ. “ಸುಪ್ರೀಂ ಕೋರ್ಟ್ ಗೈಡ್​ಲೈನ್ಸ್ ಇದೆ. ಕಮಿಷನರ್ ಸೂಚನೆಯಾಗಿದೆ ಅಂತ ನಮ್ಮ ವಾಹನಗಳನ್ನ ತಡೆದು ಕರೆ ತಂದಿದ್ದಾರೆ” ಎಂದು ವಾಟಾಳ್‌ ದೂರಿದ್ದಾರೆ.

Advertisements

“ಬಂದ್‌ಗೆ ಅನುಮತಿ ಕೋರಿ ಪತ್ರ ಬರೆದಿದ್ದೇವೆ. ಕಮಿಷನರ್ ಎಷ್ಟೇ ಮನವರಿಕೆ ಮಾಡಿದ್ರು, ಬಂದ್ ಇದ್ದೇ ಇರುತ್ತೆ. ನಾವ್ ಮಾಡೇ ಮಾಡ್ತೀವಿ” ಎಂದು ವಾಟಾಳ್ ಹೇಳಿದ್ದಾರೆ.

ಬಂದ್ ಸಮಯದಲ್ಲಿ ಏನಿರುತ್ತೆ ಮತ್ತು ಏನಿರಲ್ಲ?

ಏನಿರುತ್ತೆ?

  • ದೈನಂದಿನ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಮೆಡಿಕಲ್, ವೈದ್ಯಕೀಯ ಸೇವೆ ನಾಳೆಯೂ ಇರಲಿದೆ
  • ಆ್ಯಂಬುಲೆನ್ಸ್ , ಹೋಲ್ ಸೆಲ್ ಬಟ್ಟೆ ಅಂಗಡಿಗಳು ಇರಲಿವೆ
  • ತರಕಾರಿ,ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್, ಹೋಟೆಲ್ ಗಳ ಎಂದಿನಂತೆ ಓಪನ್ ಇರಲಿದೆ
  • BMTC-KSRTC,ಮೆಟ್ರೋ ಸಂಚಾರ, ರೈಲು ಓಡಾಡಲಿವೆ
  • ಖಾಸಗಿ ಬಸ್, ಶಾಲಾ ವಾಹನ ಓಡಾಟ ಇರಲಿದೆ.
  • ಬಾರ್ ಗಳು ತೆರೆದಿರಲಿದ್ದು, ಏರ್ ಪೋರ್ಟ್ ಟ್ಯಾಕ್ಸಿ ಸೇವೆ ಇರಲಿದೆ
  • ಶೇಕಡ 65ರಷ್ಟು ಆಟೋಗಳ ಸೇವೆ ಇರಲಿದೆ

ಏನಿರಲ್ಲ?

  • ಥಿಯೇಟರ್‌ಗಳು ಮಧ್ಯಾಹ್ನ ತನಕ ಬಂದ್
  • ಶೇಕಡ 35ರಷ್ಟು ಆಟೋ ಸೇವೆಯಲ್ಲಿ ತುಸು ವ್ಯತ್ಯಯ
  • ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ
  • ಓಲಾ-ಊಬರ್ ಸೇವೆಯಲ್ಲಿ ವ್ಯತ್ಯಯ

ನೈತಿಕ ಬೆಂಬಲ

BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ ಎನ್ನಲಾಗಿದೆ.

ಯಾರೂ ಬೆಂಬಲ ನೀಡಿಲ್ಲ

ಪ್ರವೀಣ್ ಶೆಟ್ಟಿ ಬಣ, ಕರವೇ ನಾರಾಯಣಗೌಡರ ಬಣ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X