ಬೇಸಿಗೆ ಕಾಲ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಶಹಾಪುರ ನಗರದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ ನಾಯಕ ಆಲ್ದಾಳ್ ಆಗ್ರಹಿಸಿದ್ದಾರೆ.
ವಿವಿಧ ಕೆಲಸ ಕಾರ್ಯಗಳ ನಿಮಿತ್ತ ನಗರಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಪ್ರಮುಖ ವೃತ್ತಗಳಾದ ಬಸವೇಶ್ವರ ವೃತ್ತ, ವಾಲ್ಮೀಕಿ ವೃತ್ತ, ಹೊಸ ಬಸ್ ನಿಲ್ದಾಣ ಸೇರಿದಂತೆ ಇತರ ಕಡೆ ಸಾರ್ವಜನಿಕವಾಗಿ ಕುಡಿಯುವ ನೀರಿನ ಅರವಟ್ಟಿಗೆ ಇಡಬೇಕುʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
