ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.
ಇದನ್ನು ಓದಿದ್ದೀರಾ? ಕರ್ನಾಟಕ ಬಂದ್ | ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ
ಸದ್ಯ ಹಲವೆಡೆ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖವಾಗಿ ಕೆಎಸ್‌ಆರ್‌ಟಿಸಿ, ಮೆಟ್ರೋ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಈ ನಿಟ್ಟಿನಲ್ಲಿ ಕನ್ನಡ ಪರ ಹೋರಾಟಗಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು ನಗರದಲ್ಲಿ ಬಹುತೇಕ ಪ್ರದೇಶದಲ್ಲಿ ಜನಜೀವನ ಎಂದಿನಂತಿದೆ. ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಈ ಬಂದ್‌ಗೆ ಬೆಂಬಲ ನೀಡದ ಕಾರಣ ಎಂದಿನಂತೆ ಬಸ್‌ಗಳ ಓಡಾಟವಿದೆ.
