ಎನ್‌ಸಿಪಿ (ಎಸ್‌ಪಿ) ವಕ್ತಾರರಿಗೆ ಜೀವ ಬೆದರಿಕೆ; ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಸುಪ್ರಿಯಾ ಸುಳೆ ಮನವಿ

Date:

Advertisements

ಕಳೆದ ಕೆಲವು ದಿನಗಳಿಂದ ಎನ್‌ಸಿಪಿ (ಎಸ್‌ಪಿ) ವಕ್ತಾರ ವಿಕಾಸ್ ಲಾವಾಂಡೆ ಅವರಿಗೆ ನೂರಾರು ಬೆದರಿಕೆ ಕರೆಗಳು ಬರುತ್ತಿವೆ ಎಂದು ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಪುಣೆ ಪೊಲೀಸ್ ಆಯುಕ್ತರು ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಸುಪ್ರಿಯಾ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸುಪ್ರಿಯಾ ಸುಳೆ ಅವರು, “ಕೊಲೆ ಬೆದರಿಕೆ ನೀಡುತ್ತಿರುವವರು ಸಂಭಾಜಿ ಭಿಡೆ ಗುರೂಜಿ ಅವರ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ನನಗೆ ಯಾರಿಂದಲೂ ಜೀವ ಬೆದರಿಕೆ ಕರೆ ಬಂದಿಲ್ಲ: ಮೃತ್ಯುಂಜಯ ಸ್ವಾಮೀಜಿ

Advertisements

“ಈ ಸಂಬಂಧ ರಾಜ್ಯ ಮುಖ್ಯಮಂತ್ರಿ ಮತ್ತು ಪುಣೆ ನಗರ ಪೊಲೀಸರಿಗೆ ವಿವರವಾದ ಪುರಾವೆಗಳೊಂದಿಗೆ ದೂರು ಸಲ್ಲಿಸಲಾಗಿದೆ. ಆದರೆ ಇನ್ನೂ ಕೂಡಾ ಯಾರ ವಿರುದ್ಧವೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ತನ್ನ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಮಾರ್ಚ್ 1 ರ ಸಂಜೆ 250 ರಿಂದ 300 ಯುವಕರ ಗುಂಪು ಹವೇಲಿ ತಾಲ್ಲೂಕಿನ ವಿಕಾಸ್ ಲಾವಾಂಡೆ ಅವರ ಮನೆಯ ಭಾಗದಲ್ಲಿ ಗಮಭೆ ಸೃಷ್ಟಿಸುವ ಉದ್ದೇಶದಿಂದ ಹೋಗಿತ್ತು. “ಆ ಸಮಯದಲ್ಲಿ, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಗ್ರಾಮದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಯಿತು. ಹೀಗಾಗಿ ದೊಡ್ಡ ಅನಾಹುತ ತಪ್ಪಿತು” ಎಂದು ತಿಳಿಸಿದರು. ನಿನ್ನೆಯೂ ಅಪರಿಚಿತ ಕರೆಗಳು ಬಂದಿವೆ. ಲಾವಾಂಡೆಗೆ ಬೆದರಿಕೆ ಹಾಕಲಾಗಿದೆ ಎಂದು ಸುಪ್ರಿಯಾ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X