ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಾ ಗ್ರಾಮದಲ್ಲಿ ನಡೆದಿದೆ.
ಘತ್ತರಗಾ ಗ್ರಾಮದ ಚಂದ್ರಕಾಂತ್ ಬೇಲೂರ್ (57) ಮೃತ ರೈತ. ರೈತ ಚಂದ್ರಕಾಂತ್ ಅವರು ಬ್ಯಾಂಕ್ ಮತ್ತು ಖಾಸಗಿಯಾಗಿ 40 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಪ್ರತಿಭಟನೆ: ರೈತ ಆತ್ಮಹತ್ಯೆ ಹಿನ್ನೆಲೆ ಅಫಜಲಪುರ ತಹಶೀಲ್ದಾರ್ ಕಚೇರಿ ಮುಂಭಾಗ ರೈತನ ಮೃತದೇಹವಿಟ್ಟು ಪ್ರತಿಭಟನೆ ನಡೆಸಲಾಯಿತು. ಅಲ್ಲದೆ, ಕಲಬುರಗಿ – ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.