11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವಲಸೆ ಕಾರ್ಮಿಕನನ್ನು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸರು ಬಂಧಿಸಿದ್ದಾರೆ.
ಸಿಂಧನೂರು ಪಟ್ಟಣದಲ್ಲಿ ಘಟನೆ ನಡೆದಿದೆ. 52 ವರ್ಷದ ಸಪನ್ ಮೊಂಡಲ್ ಬಂಧತ ಆರೋಪಿ.
“ಆರೋಪಿ ಸಂತ್ರಸ್ತೆಯ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದನು. ಶಾಲೆಗೆ ಹೋಗುತ್ತಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿನಿಯನ್ನು ಆರೋಪಿ ಚಾಕೊಲೇಟ್ ಕೊಡಿಸುವುದಾಗಿ ತನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿ ಪೋಷಕರಿಗೆ ಕೃತ್ಯದ ಬಗ್ಗೆ ವಿವರಿಸಿದ್ದಾಳೆ. ಪೋಷಕರು ನೀಡಿದ ದೂರಿನ ಆಧಾರ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.