ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ: ಅತ್ಯುನ್ನತ ಪ್ರಶಸ್ತಿ ಪಡೆದ ಛತ್ತೀಸ್‌ಗಢದ ಮೊದಲ ಲೇಖಕ

Date:

Advertisements

2024ನೇ ಸಾಲಿನ 59ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟಿಸಲಾಗಿದ್ದು, ಹಿಂದಿಯ ಹಿರಿಯ ಸಾಹಿತಿ 88 ವರ್ಷದ ವಿನೋದ್​ ಕುಮಾರ್​​ ಶುಕ್ಲಾ ಅವರನ್ನು ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಛತ್ತೀಸ್‌ಗಢದಿಂದ ಭಾರತದ ಅತ್ಯುನ್ನತ ಸಾಹಿತ್ಯ ಗೌರವವನ್ನು ಪಡೆದ ಮೊದಲ ಲೇಖಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸಿದ್ಧ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಈ ಪ್ರಶಸ್ತಿಯನ್ನು ಪಡೆದ 12ನೇ ಹಿಂದಿ ಸಾಹಿತಿಯಾಗಿದ್ದಾರೆ.

88 ವರ್ಷದ ಕವಿ, ಸಣ್ಣ ಕಥೆಗಾರ ಮತ್ತು ಪ್ರಬಂಧಕಾರರಾದ ವಿನೋದ್ ಶುಕ್ಲಾ ಛತ್ತೀಸ್‌ಗಢದಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಲೇಖಕರಾಗಿದ್ದಾರೆ. ಸಮಕಾಲೀನ ಹಿಂದಿ ಸಾಹಿತ್ಯದಲ್ಲಿ ಅತ್ಯಂತ ವಿಶಿಷ್ಟ ಧ್ವನಿಗಳಲ್ಲಿ ಒಬ್ಬರೆಂದು ವಿನೋದ್ ಶುಕ್ಲಾ ಅವರನ್ನು ಪರಿಗಣಿಸಲಾಗಿದೆ. 11 ಲಕ್ಷ ರೂ. ನಗದು ಬಹುಮಾನ, ಕಂಚಿನ ಸರಸ್ವತಿ ಪ್ರತಿಮೆ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುವ ಈ ಪ್ರಶಸ್ತಿಯನ್ನು ಗೆದ್ದ 12ನೇ ಹಿಂದಿ ಬರಹಗಾರ ಇವರಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

“ಇದು ತುಂಬಾ ದೊಡ್ಡ ಪ್ರಶಸ್ತಿ. ನಾನು ಅದನ್ನು ಸ್ವೀಕರಿಸುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ. ನಾನು ಪ್ರಶಸ್ತಿಗಳಿಗೆ ನಿಜವಾಗಿಯೂ ಗಮನ ಕೊಡಲಿಲ್ಲ. ಜನರು ಆಗಾಗ ಮಾತನಾಡುವಾಗ ನಾನು ಜ್ಞಾನಪೀಠಕ್ಕೆ ಅರ್ಹನೆಂದು ಹೇಳುತ್ತಿದ್ದರು. ಆದರೆ ಅದಕ್ಕೆ ಪ್ರತಿಕ್ರಿಯಿಸಲು ಸರಿಯಾದ ಪದಗಳು ನನಗೆ ಎಂದಿಗೂ ಸಿಗಲಿಲ್ಲ” ಎಂದು ವಿನೋದ್ ಶುಕ್ಲಾ ಹೇಳಿದ್ದಾರೆ.

“ಬರವಣಿಗೆ ಸಣ್ಣ ಕೆಲಸವಲ್ಲ. ನೀವು ಬರೆಯುತ್ತಿದ್ದರೆ, ಬರೆಯುತ್ತಲೇ ಇರಿ. ನಿಮ್ಮ ಬಗ್ಗೆ ವಿಶ್ವಾಸವಿಡಿ. ಮತ್ತು ನಿಮ್ಮ ಕೃತಿ ಪ್ರಕಟವಾದ ನಂತರ ಇತರರು ಪ್ರತಿಕ್ರಿಯೆ ನೀಡಿದರೆ ಅದರ ಬಗ್ಗೆಯೂ ಗಮನ ಕೊಡಿ” ಎಂದು ಅವರು ಕಿರಿಯ ಬರಹಗಾರರಿಗೆ ಸಲಹೆ ನೀಡಿದ್ದಾರೆ.

ಬರಹಗಾರ್ತಿ ಮತ್ತು ಮಾಜಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರತಿಭಾ ರೇ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನಪೀಠ ಆಯ್ಕೆ ಸಮಿತಿಯು ವಿನೋದ್ ಶುಕ್ಲಾ ಅವರ ಹೆಸರನ್ನು ಅಂತಿಮಗೊಳಿಸಿತು.

ಈ ಸಭೆಯಲ್ಲಿ ಹಾಜರಿದ್ದ ಇತರ ಸಮಿತಿ ಸದಸ್ಯರಲ್ಲಿ ಮಾಧವ್ ಕೌಶಿಕ್, ದಾಮೋದರ್ ಮೌಜೋ, ಪ್ರಭಾ ವರ್ಮ, ಅನಾಮಿಕಾ, ಎ. ಕೃಷ್ಣ ರಾವ್, ಪ್ರಫುಲ್ ಶಿಲೇದಾರ್, ಜಾನಕಿ ಪ್ರಸಾದ್ ಶರ್ಮಾ ಮತ್ತು ಜ್ಞಾನಪೀಠ ನಿರ್ದೇಶಕ ಮಧುಸೂದನ್ ಆನಂದ್ ಸೇರಿದ್ದಾರೆ. 1961ರಲ್ಲಿ ಸ್ಥಾಪಿಸಲಾದ ಜ್ಞಾನಪೀಠ ಪ್ರಶಸ್ತಿಯನ್ನು ಮೊದಲು ಮಲಯಾಳಂ ಕವಿ ಜಿ. ಶಂಕರ ಕುರುಪ್ ಅವರ ಒಡಕ್ಕುಝಲ್ ಸಂಕಲನಕ್ಕಾಗಿ 1965ರಲ್ಲಿ ನೀಡಲಾಯಿತು. ಕನ್ನಡದ 8 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X