ಕೇಂದ್ರದ ಸುಗ್ರೀವಾಜ್ಞೆ ವಿರುದ್ಧದ ಅಭಿಯಾನ ಬೆಂಬಲಿಸದಿದ್ದರೆ ವಿಪಕ್ಷಗಳ ಸಭೆಗೆ ಗೈರು: ಕಾಂಗ್ರೆಸ್‌ಗೆ ಅರವಿಂದ್‌ ಕೇಜ್ರಿವಾಲ್‌ ಎಚ್ಚರಿಕೆ

Date:

Advertisements
  • ಸುಗ್ರೀವಾಜ್ಞೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ ಎಂದಿದ್ದ ಅರವಿಂದ್‌ ಕೇಜ್ರಿವಾಲ್
  • ನಿತೀಶ್‌ ನೇತೃತ್ವದಲ್ಲಿ ಜೂನ್‌ 24 ರಂದು ಆಯೋಜನೆಯಾಗಿರುವ ಪ್ರತಿಪಕ್ಷಗಳ ಸಭೆ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಶುಕ್ರವಾರ (ಜೂನ್‌ 23) ಪ್ರತಿಪಕ್ಷಗಳು ಕರೆದಿರುವ ಸಭೆಗೆ ಗೈರು ಹಾಜರಾಗುವ ಸಂಬಂಧ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಆಡಳಿತ ಸೇವೆಗಳನ್ನು ಮರುರೂಪಿಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರೋಧಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಆರಂಭಿಸಿರುವ ಅಭಿಯಾನಕ್ಕೆ ಕಾಂಗ್ರೆಸ್‌ ಬೆಂಬಲ ನೀಡದಿದ್ದರೆ ತಮ್ಮ ಪಕ್ಷ ಪ್ರತಿಪಕ್ಷಗಳ ಸಭೆಗೆ ಗೈರು ಹಾಜರಾಗುವುದು ಎಂದು ಕೇಜ್ರಿವಾಲ್‌ ಕಾಂಗ್ರೆಸ್‌ಗೆ ಹೇಳಿದ್ದಾರೆ ಎಂದು ಮಾಧ್ಯಮಗಳು ಗುರುವಾರ (ಜೂನ್ 22) ವರದಿ ಮಾಡಿವೆ.

2024ರ ಲೋಕಸಭೆ ಚುನಾವಣೆಗೆ ಒಗ್ಗೂಡುವ ಹಾಗೂ ಕಾರ್ಯತಂತ್ರ ರೂಪಿಸುವ ಒಡೆದ ಪ್ರತಿಪಕ್ಷಗಳ ಪ್ರಯತ್ನಗಳನ್ನು ಅರವಿಂದ್‌ ಕೇಜ್ರಿವಾಲ್‌ ಅವರ ಈ ನಡೆಯು ಹಳಿತಪ್ಪಿಸುವ ಅಪಾಯ ಉಂಟು ಮಾಡಲಿದೆ ಎಂದು ಹೇಳಲಾಗಿದೆ.

Advertisements

“ದೆಹಲಿ ಸುಗ್ರೀವಾಜ್ಞೆ ವಿರೋಧಿಸುವ ವಿಚಾರದಲ್ಲಿ ಕಾಂಗ್ರೆಸ್‌ ನಮ್ಮನ್ನು ಬೆಂಬಲಿಸಬೇಕು. ಅದು ಹಾಗೆ ಮಾಡದಿದ್ದಲ್ಲಿ ಪ್ರತಿಪಕ್ಷಗಳ ಸಭೆಯನ್ನು ನಾವು ಬಹಿಷ್ಕರಿಸುತ್ತೇವೆ. ಮುಂದಿನ ಪ್ರತಿಪಕ್ಷಗಳ ಸಭೆಯಿಂದಲೂ ನಾವು ದೂರ ಉಳಿಯುತ್ತೇವೆ” ಎಂದು ಎಎಪಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಶುಕ್ರವಾರ ನಡೆಯುವ ಪ್ರತಿಪಕ್ಷಗಳ ಸಭೆಯಲ್ಲಿ ಕೇಂದ್ರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್‌ ತನ್ನ ನಿಲುವು ಸ್ಪಷ್ಟಪಡಿಸಲಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಮಂಗಳವಾರ ಭರವಸೆ ವ್ಯಕ್ತಪಡಿಸಿದ್ದರು.

ದೆಹಲಿ ಆಡಳಿತ ಸೇವೆಯ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುವ ಸುಗ್ರೀವಾಜ್ಞೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ತಿಂಗಳು ಪರಿಚಯಿಸಿದೆ.

ಈ ಸುದ್ದಿ ಓದಿದ್ದೀರಾ? ವೈವಾಹಿಕ ವಿವಾದದಲ್ಲಿ ನ್ಯಾಯಾಲಯದ ನಡೆಯಿಂದ ಅಸಮಾಧಾನ; ನ್ಯಾಯಾಧೀಶರ ಕಾರಿಗೆ ವ್ಯಕ್ತಿಯಿಂದ ಹಾನಿ

ಕೇಂದ್ರದ ನಡೆ ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧವಾಗಿದೆ ಅರವಿಂದ್‌ ಕೇಜ್ರಿವಾಲ್‌ ಟೀಕಿಸಿದ್ದರು. ದೆಹಲಿಯಲ್ಲಿ ಪೊಲೀಸ್‌, ಸಾರ್ವಜನಿಕ ಆಡಳಿತ ಮತ್ತು ಭೂಮಿ ಸೇರಿದಂತೆ ಇತರ ಸೇವೆಗಳ ನಿಯಂತ್ರಣ ಚುನಾಯಿತ ಸರ್ಕಾರಕ್ಕೆ ಸೇರಿದೆ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿತ್ತು.

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ನೇತೃತ್ವದಲ್ಲಿ ಶುಕ್ರವಾರ ಪ್ರತಿಪಕ್ಷಗಳ ಪ್ರಮುಖ ನಾಯಕರ ಸಭೆ ನಡೆಯಲಿದೆ. ಸಭೆಗೆ ಹಾಜರಾಗುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಈಗಾಗಲೇ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X