ಶಾಲಾ ಮಕ್ಕಳ ಬ್ಯಾಗ್‌ ತೂಕ ಕಡಿತ: ಶಿಕ್ಷಣ ಇಲಾಖೆ ಆದೇಶ

Date:

Advertisements
  • ಯಶಪಾಲ ವರ್ಮ ಸಮಿತಿ ಸಲ್ಲಿಸಿದ್ದ ‘ಹೊರೆ ಇಲ್ಲದ ಕಲಿಕೆ’ ವರದಿ
  • ‘ಶಾಲಾ ಬ್ಯಾಗ್‌ ನೀತಿ–2020’ರ ಆಧಾರದ ಮೇಲೆ ತೂಕ ಕಡಿಮೆ

ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್‌ನ ಹೊರೆ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ಕೂಡ 1.5 ಕೆ.ಜಿಯಿಂದ 5 ಕಿ.ಜಿ ಮಾತ್ರವೇ ಇರಬೇಕೆಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ಮಕ್ಕಳ ಬ್ಯಾಗ್‌ ಹೊರೆ ಕಡಿತಗೊಳಿಸುವ ಉದ್ದೇಶದಿಂದ 1993ರಲ್ಲಿ ನೇಮಿಸಿದ್ದ ಯಶಪಾಲ ವರ್ಮ ಸಮಿತಿ ಸಲ್ಲಿಸಿದ್ದ ‘ಹೊರೆ ಇಲ್ಲದ ಕಲಿಕೆ’ ವರದಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ ಅಧ್ಯಯನ ವರದಿ ಹಾಗೂ ಕೇಂದ್ರ ಸರ್ಕಾರ ‘ಶಾಲಾ ಬ್ಯಾಗ್‌ ನೀತಿ–2020’ಯ ಆಧಾರದ ಮೇಲೆ ಶಾಲಾ ಮಕ್ಕಳ ಬ್ಯಾಗ್‌ ತೂಕವನ್ನು ಕಡಿಮೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಬ್ಯಾಗ್‌ ತೂಕ 1 ಮತ್ತು 2ನೇ ತರಗತಿ ಮಕ್ಕಳಿಗೆ 1.5ರಿಂದ 2 ಕೆ.ಜಿ., 3ರಿಂದ 5ನೇ ತರಗತಿ ಮಕ್ಕಳಿಗೆ 2ರಿಂದ 3 ಕೆ.ಜಿ., 6ರಿಂದ 8ನೇ ತರಗತಿ 3ರಿಂದ 4 ಕೆ.ಜಿ. ಹಾಗೂ 9ರಿಂದ 10ನೇ ತರಗತಿಯ ಮಕ್ಕಳಿಗೆ 4ರಿಂದ 5 ಕೆ.ಜಿ.ವರೆಗೆ ನಿಗದಿ ಮಾಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯೊಂದಿಗೆ ಅನುಚಿತ ವರ್ತನೆ: ಕ್ಯಾಬ್ ಚಾಲಕನ ವಿರುದ್ಧ ಕ್ರಮ ಕೈಗೊಂಡ ಉಬರ್

ಮಕ್ಕಳು ಶಾಲೆಗಳಿಗೆ ಅಗತ್ಯವಿರುವ ಕಲಿಕಾ ಸಾಮಗ್ರಿಗಳನ್ನು ಮಾತ್ರ ತರುವಂತೆ ಶಿಕ್ಷಕರು ನೋಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಮತ್ತು ಮೂಲ ಸೌಕರ್ಯಗಳನ್ನು ಶಾಲೆಯಲ್ಲೇ ಒದಗಿಸಬೇಕು. ನಿಯಮಗಳನ್ನು ಉಲ್ಲಂಘಿಸಿದರೆ ಶಾಲೆ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X