ಆರೋಗ್ಯ ಸಚಿವರ ಕೈ ಸೇರಿದ ಆಡಳಿತ ಸುಧಾರಣಾ ವರದಿಯಲ್ಲೇನಿದೆ ಗೊತ್ತೇ?

Date:

Advertisements
  • ಆರೋಗ್ಯ ಸಚಿವರಿಗೆ ಸಮಿತಿ ವರದಿ ಸಲ್ಲಿಸಿದ ಅಧ್ಯಕ್ಷ ವಿಜಯಭಾಸ್ಕರ್
  • ವರದಿ ಅನುಷ್ಢಾನದ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಆರೋಗ್ಯ ಇಲಾಖೆಯ ಸೇವೆಗಳನ್ನು ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣಾ ಆಯೋಗ -2 ಹಲವು ಶಿಫಾರಸ್ಸುಗಳನ್ನ ಮಾಡಿದೆ. ಈ ಸಂಬಂಧ ಆರೋಗ್ಯ ಸಚಿವರನ್ನು ಇಂದು ಭೇಟಿ ಮಾಡಿದ ಸಮಿತಿ ಅಧ್ಯಕ್ಷ ಟಿ.ಎಂ ವಿಜಯಭಾಸ್ಕರ್ ಪ್ರಮುಖ 21 ಅಂಶಗಳನ್ನು ಒಳಗೊಂಡ ವರದಿ ಸಲ್ಲಿಕೆ ಮಾಡಿದರು.

ವರದಿ ಸ್ವೀಕರಿಸಿದ ಬಳಿಕ ವಿಜಯಭಾಸ್ಕರ್ ಅವರೊಂದಿಗೆ ವರದಿಯ ಅಂಶಗಳ ಕುರಿತು ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎರಡು ಮೂರು ಹಂತಗಳಲ್ಲಿ ವರದಿ ಅನುಷ್ಢಾನಗೊಳಿಸುವ ಭರವಸೆ ನೀಡಿದರು. ವರದಿಯಲ್ಲಿರುವ ಕೆಲವು ಶಿಫಾರಸ್ಸುಗಳನ್ನ ಆರೋಗ್ಯ ಇಲಾಖೆ ಈ ಬಾರಿಯ ಬಜೆಟ್ ನಲ್ಲೇ ಅನುಷ್ಠಾನಗೊಳಿಸುತ್ತಿದೆ.

ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ ಎಂ.ಬಿ.ಬಿ.ಎಸ್ ವೈದ್ಯರನ್ನು ನಗರ ಪ್ರದೇಶಗಳಿಗೂ ಬಳಸಿಕೊಳ್ಳಲು ಈ ಬಾರಿಯ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ.

Advertisements

ಸರ್ಕಾರಿ ಆಸ್ಪತ್ರೆಗಳಲ್ಲಿ ನರ್ಸಿಂಗ್ ಕೋರ್ಸ್ ಗಳನ್ನು ಈಗಾಗಲೇ ಕೆ.ಸಿ ಜನರಲ್ ಆಸ್ಪತ್ರೆಯಿಂದ ಪ್ರಾರಂಭಿಸಲಾಗಿದೆ. ತಾಲೂಕು ಮಟ್ಟದ ಪ್ರಮುಖ ಆಸ್ಪತ್ರೆಗಳಲ್ಲಿ ನರ್ಸಿಂಗ್ ಕೋರ್ಸ್ ಪ್ರಾರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಭರವಸೆ ನೀಡಿದರು.

ಆಯೋಗದ ವರದಿಯ ಹೈಲೆಟ್ಸ್ ಇಲ್ಲಿದೆ.

1. ಆರೋಗ್ಯ ಇಲಾಖೆಯಲ್ಲಿ ನರ್ಸಿಂಗ್ ನಿರ್ದೇಶನಾಲಯ ಸ್ಥಾಪನೆಗೆ ಶಿಫಾರಸ್ಸು.
2. ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ ಎಂಬಿಬಿಎಸ್ ವೈದ್ಯರನ್ನು ನಗರ ಪ್ರದೇಶಗಳಲ್ಲೂ ಬಳಕೆಗೆ ಸೂಚನೆ.
3. ಕೇಂದ್ರ ವೈದ್ಯಕೀಯ ಸಂಸ್ಥೆಗಳ ಮಾದರಿಯಲ್ಲಿ ಎಲ್ಲಾ ಸರ್ಕಾರಿ ವೈದ್ಯರ ಪ್ರವೇಟ್ ಪ್ರಾಕ್ಟೀಸ್ ನಿಷೇಧ.

4. ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಜೆ ಒಪಿಡಿಗಳನ್ನು ಸಹ ಪ್ರಾರಂಭಿಸಲು ಸಲಹೆ.
5. ತಾಲ್ಲೂಕು ಆಸ್ಪತ್ರೆಗಳಲ್ಲಿ ಒಳರೋಗಿಗಳು ಮತ್ತು ಹೆರಿಗೆಗಳ ಸಂಖ್ಯೆಯನ್ನು ಅವಲಂಬಿಸಿ, ಹೆಚ್ಚಿನ ಕೆಲಸದ ಹೊರೆ ಹೊಂದಿರುವ ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ 50 ಹೊಸ ಸಾಮಾನ್ಯ ಹಾಸಿಗೆಗಳನ್ನು ಮಂಜೂರು ಮಾಡಲು ಶಿಫಾರಸ್ಸು
6. ನಗರ ಪ್ರಾ.ಆ.ಕೇಂದ್ರಗಳಲ್ಲಿ ಸ್ತ್ರೀರೋಗತಜ್ಞ, ಮಕ್ಕಳ ವೈದ್ಯರು, ಅರಿವಳಿಕೆ ತಜ್ಞರು, ದಂತ ಶಸ್ತ್ರಚಿಕಿತ್ಸಕರು ವಾರಕ್ಕೊಮ್ಮೆ ಗಂಟೆಯ ಆಧಾರದ ಮೇಲೆ ಮತ್ತು ಮೂಳೆ ಚಿಕಿತ್ಸಕ, ಮನೋವೈದ್ಯರು, ಫಿಸಿಯೋಥೆರಪಿಸ್ಟ್, ಜೆರಿಯಾಟ್ರಿಶಿಯನ್ ತಿಂಗಳಿಗೊಮ್ಮೆ ಗಂಟೆಯ ಆಧಾರದ ಮೇಲೆ ತಜ್ಞರ ಸೇವೆಗಳನ್ನು ಪಡೆಯಲು ಎಆರ್ ಎಸ್‌ಗೆ ಹಣವನ್ನು ಒದಗಿಸಬಹುದು.ಆಡಳಿತ ಸುಧಾರಣಾ ಆಯೋಗದ ವರದಿ 1

ಈ ಸುದ್ದಿ ಓದಿದ್ದೀರಾ? :ಖಾಲಿ ಹುದ್ದೆ ಭರ್ತಿಗೆ ಮುಂದಾದ ಗೃಹ ಇಲಾಖೆ; ಮುಂದಿನ ವಾರದಲ್ಲಿ ನೂತನ ನೇಮಕಾತಿ

7. ಎಲ್ಲಾ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಡಳಿತಾಧಿಕಾರಿಯ ಅಡಿಯಲ್ಲಿ
“ಆಸ್ಪತ್ರೆ ವ್ಯವಸ್ಥಾಪಕರ” ಹುದ್ದೆ ನೇಮಕಕ್ಕೆ ಸಲಹೆ.
8. ಎಎನ್ಎಂಗಳು ಮತ್ತು ಪುರುಷ ಆರೋಗ್ಯ ಕಾರ್ಯಕರ್ತರು ದ್ವಿ-ಚಕ್ರ ವಾಹನಗಳನ್ನು ಖರೀದಿಸಲು 20 ಕೋಟಿ ವೆಚ್ಚದಲ್ಲಿ ಶೇ.50ರ ಸಬ್ಸಿಡಿ ನೀಡಿ.
9. 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಲ್ಲಿ ಜಿಎನ್‌ಎಂ ಅಥವಾ ಬಿಎಸ್‌ಸಿ ನರ್ಸಿಂಗ್ ಕೋರ್ಸ್‌ಗಳ 20 ಸೀಟುಗಳೊಂದಿಗೆ ನರ್ಸಿಂಗ್ ಕಾಲೇಜು ಹಾಗೂ 10 ಪ್ಯಾರಾಮೆಡಿಕಲ್ ಸೀಟುಗಳೊಂದಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ಗಳನ್ನು ಪ್ರಾರಂಭಿಸುವುದು.
10. ವಿಭಾಗಿಯ ಮಟ್ಟದಲ್ಲಿ ಸಿಸ್ಟಂ ಇಂಪ್ರೂಮೆಂಟ್ ಟೀಮ್ (ಎಸ್ಐಟಿ) ರಚನೆ. ವೈದ್ಯರು, ಸಾರ್ವಜನಿಕ ಆರೋಗ್ಯ ತಜ್ಞರು, ನಸಿರ್ಂಗ್ ಅಧಿಕಾರಿ, ಆರೋಗ್ಯ ತಪಾಸಣಾ ಅಧಿಕಾರಿಗಳನ್ನ ಒಳಗೊಂಡ ಟೀಂ ರಚನೆಗೆ ಸಲಹೆ.
11. ಪ್ರತಿ ಬುಧವಾರ ತಾಯಿಯ ಆರೋಗ್ಯ, ಮರಣ ಪ್ರಮಾಣ ಕುರಿತು ಇಲಾಖೆಯಿಂದ ಸ್ಕ್ರೀನಿಂಗ್ ಗೆ ಸೂಚನೆ.
ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಜೆ ಕ್ಲಿನಿಕ್‌ಗಳನ್ನು ತೆರೆಯಲು ಸೂಕ್ತ ಪ್ರಸ್ತಾವನೆ.
12. ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಯೋಜನೆಯಡಿ ವಿಕಲಚೇತನರಿಗೆ ಚಿಕಿತ್ಸೆ.
ಪುರುಷ ಆರೋಗ್ಯ ಕಾರ್ಯಕರ್ತರಿಗೆ ಡ್ರೆಸ್ ಕೋಡ್ ಕಡ್ಡಾಯ.
13. ಆಯುಷ್ ಇಲಾಖೆ-ಸರ್ಕಾರಿ ಕೇಂದ್ರ ಔಷಧಾಲಯಕ್ಕೆ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ, ಸಾಂಬಾರ ಮಂಡಳಿ, ಲ್ಯಾಂಪ್ಸ್ ಸೊಸೈಟಿಗಳು, ಕೆಎಂಎಫ್ ಮತ್ತು ಇತರ ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅರೆ ಸರ್ಕಾರಿ ಸಂಸ್ಥೆಗಳಿಂದ ನೇರವಾಗಿ ಕಚ್ಚಾ ಸಾಮಗ್ರಿಗಳು ಮತ್ತು ಔಷಧಿಗಳನ್ನು ಖರೀದಿಸಲು ಕೆಟಿಟಿಪಿ ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ವಿನಾಯಿತಿ ನೀಡಬಹುದು.
14. ವಿಶೇಷ ಕೌಶಲಗಳನ್ನು ಹೊಂದಿರುವ ಆಯುಷ್ ಪಿಜಿ ವೈದ್ಯರ ಸೇವೆಯನ್ನೂ, ಔಷಧಾಲಯಗಳ ಬದಲು ಆಯುಷ್ ಆಸ್ಪತ್ರೆಗಳಿಗೆ ಮಾತ್ರ ನಿಯೋಜನೆಗೆ ನಿರ್ಧಾರ ಕೈಗೊಳ್ಳಲು ಸಲಹೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X