ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿದೆ.
ಈ ನಡುವೆ ಸೋಮವಾರ ಅಥವಾ ಮಂಗಳವಾರ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಆದ್ದರಿಂದ ಶೀಘ್ರವೇ ಅರ್ಜಿ ವಿಚಾರಣೆ ನಡೆಯಲಿದೆ.
ಇದನ್ನು ಓದಿದ್ದೀರಾ? ಮುನಿರತ್ನ ಹನಿಟ್ರ್ಯಾಪ್ ಪ್ರಕರಣ: ಸರ್ಕಾರದಿಂದ ರಕ್ಷಣೆ ಇಲ್ಲ: ಸಂತ್ರಸ್ತೆ ಆರೋಪ
ಹನಿಟ್ರ್ಯಾಪ್ ಆರೋಪಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನ್ಯಾಯಾಧೀಶರುಗಳು ಸೇರಿದಂತೆ ಹಲವು ಸಚಿವರುಗಳು ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆ ಅಧಿವೇಶನದಲ್ಲಿ ತನ್ನನ್ನೂ ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದು, ಇದೀಗ ವಿವಾದ ಭುಗಿಲೆದ್ದಿದೆ. ಬಿಜೆಪಿಯ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಕಾಂಗ್ರೆಸ್ ಸರ್ಕಾರವು ‘ಹನಿಟ್ರ್ಯಾಪ್ ಫ್ಯಾಕ್ಟರಿ’ ಎಂದು ಆರೋಪಿಸಿದ್ದಾರೆ.
ಸದ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರುಗಳನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ 48 ರಾಜಕಾರಣಿಗಳು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
