ರಾಜೀನಾಮೆ ಸಲ್ಲಿಸಿಲ್ಲ, ಹಿತೈಷಿಗಳು ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ: ಸಭಾಪತಿ ಬಸವರಾಜ ಹೊರಟ್ಟಿ

Date:

Advertisements

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ನಿರ್ಧರಿಸಿದ್ದು ನಿಜ. ಆದರೆ ಇದೀಗ ಬಹಳ ಜನ ಹಿತೈಷಿಗಳು ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.

ರಾಜೀನಾಮೆ ಪತ್ರ ವೈರಲ್ ಆಗುತ್ತಿರುವ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಅವರು, “ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ” ಎಂದರು.

“ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

“ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನ ಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ. ಕಾಲ ಕೆಟ್ಟಿದೆ, ಸದನದ ಗೌರವ ಹೋಗಿ ಬಹಳ ದಿನ ಆಗಿದೆ” ಎಂದು ಆರೋಪಿಸಿ ರಾಜೀನಾಮೆ ಮಾತುಗಳನ್ನು ಹೊರಟ್ಟಿ ಹೊರಹಾಕಿದ್ದರು.

“ಚುನಾವಣೆಯಲ್ಲಿ ಸೋಲಿಸೋಕೆ ಆಗಿದಿದ್ರೆ ಈ ತರಹ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತಿಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದರು

ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫೇಕ್ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಅದು ನಕಲಿ ಪತ್ರ ಎಂದು ಹೊರಟ್ಟಿ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X