ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ರಾಯಚೂರು ಜಿಲ್ಲೆ ಶಹಾಪುರ್ ತಾಲೂಕಿನ ಶಾರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುವವರಿಗಾಗಿ ಕಾನೂನು, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಕುರಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ, ಪೋಷಕರಿಗೆ, ಸಮುದಾಯದವರಿಗೆ ಕಾನೂನು ಅರಿವು, ಆರೋಗ್ಯ, ಶಿಕ್ಷಣದ ಮಹತ್ವ ಕುರಿತು ಅರಿವು ಮೂಡಿಸಲಾಯಿತು.
ನ್ಯಾಷನಲ್ ಚೈಲ್ಡ್ ಲೇಬರ್ ಪಾಲಿಸಿ ನಿರ್ದೇಶಕ ರಿಯಾಜ್ ಪಟೇಲ್, ಮಾತನಾಡಿ, “ಸಮಾಜದಲ್ಲಿ ನಡೆಯುವ ಬಾಲ್ಯ ವಿವಾಹ, ಬಾಲಕಾರ್ಮಿಕತೆ ನಿರ್ಮೂಲನೆ ಮಾಡಬೇಕು ಹಾಗೂ ಪ್ರತಿಯೊಂದು ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು” ಎಂದರು.
ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಪ್ರಬಂಧ, ಚಿತ್ರಕಲೆ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿಪತ್ರ ಮತ್ತು ಬಹುಮಾನ ನೀಡಿ ಗೌರವಿಸಲಾಯಿತು.
“ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ಅನಿಲ್ ತೇಜಪ್ಪ ಬಲ್ಲುರ್ಕರ್ ಮಾತನಾಡಿ, “ಮಕ್ಕಳಿಗೆ ರಕ್ಷಣೆ, ಪೋಷಣೆ ಆರೋಗ್ಯ ನೀಡಿ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಸಮುದಾಯದ ಮುಖಂಡರಲ್ಲಿ ಹಾಗೂ ಪೋಷಕರಲ್ಲಿ ಮನವಿ” ಮಾಡಿದರು.
ಇದನ್ನೂ ಓದಿ: ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರತೆ ಖಂಡನೀಯ: ದಸಂಸ ಪ್ರತಿಭಟನೆ
ಕಾರ್ಯಕ್ರಮದಲ್ಲಿ ಕಾರ್ಮಿಕ ನೀರಿಕ್ಷಕಿ ಪ್ರಿಯಾಂಕಾ ವಾಸುತ್ತಕರ್, ವೈದ್ಯ ಉಪನ್ಯಾಸಕ ಗುರುರಾಜ್, ಸಂತೋಷ ವಿಶ್ವಕರ್ಮ, ರಾಬರ್ಟ್, ಭೀಮಬಾಯಿ, ಶಿವ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಮತ್ತು ಮಕ್ಕಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿದ್ದರು.