ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ | ಕಾಂಗ್ರೆಸ್ ವಿರುದ್ಧ ಬಿಜೆಪಿ ಪಿತೂರಿ:‌ ಡಿ ಕೆ ಶಿವಕುಮಾರ್ ಆರೋಪ

Date:

Advertisements

ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಸೋಮವಾರ ಮಾಧ್ಯಮ ಪ್ರತಿನಿಧಿಗಳು, ‘ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದೀರಿ ಎಂದು ಬಿಜೆಪಿಯವರು ಟ್ವಿಟರ್ ನಲ್ಲಿ ಹಾಗೂ ಸಂಸತ್ ನಲ್ಲಿ ಟೀಕೆ ಮಾಡುತ್ತಿದೆ’ ಎಂದು ಕೇಳಿದಾಗ, “ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ” ಎಂದರು.

“ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ” ಎಂದು ಹೇಳಿದರು.

Advertisements

“ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಬಗ್ಗೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ. ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧರ್ಮಾಧಾರಿತ ಮೀಸಲಾತಿ | ಅವರು ಸುಳ್ಳು ಹೇಳ್ತಾನೇ ಇರ್ತರೆ, ನೀವು ಸತ್ಯ ಹೇಳ್ತಾನೇ ಇರ್ಬೇಕು!

ಬಿಜೆಪಿಯ ಅಮಿತ್ ಮಾಳವಿಯಾ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, “ರಾಜಕೀಯ ವ್ಯಕ್ತಿಯಾದ ಅವರು ಇಡೀ ದೇಶವನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಬಿಜೆಪಿ ಯಾವಾಗಲೂ ದೇಶವನ್ನು ತಪ್ಪು ಹಾದಿಗೆ ಎಳೆಯುವ ಕೆಲಸ ಮಾಡುತ್ತಲೇ ಬಂದಿದೆ. ನಾನು ಎಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿದ್ದೇನೆ ಎಂದು ತೋರಿಸಲಿ. ಬಿಜೆಪಿಯವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ನನ್ನ, ಸೋನಿಯಾ ಗಾಂಧಿ ಅವರ ಕುಟುಂಬದ ಹಾಗೂ ಕಾಂಗ್ರೆಸ್ ಪಕ್ಷದ ಹೆಸರು ತೆಗೆದುಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ” ಎಂದು ಖಾರವಾಗಿ ನುಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಸಂವಿಧಾನ ಬದಲಾವಣೆಗೆ ನಾವು ಅವಕಾಶ ನೀಡುವುದಿಲ್ಲ ಎಂದಿದ್ದಾರಲ್ಲ ಎಂದು ಕೇಳಿದಾಗ, “ನಾವು ಈ ದೇಶಕ್ಕೆ ಸಂವಿಧಾನ ನೀಡಿದವರು. ಅದನ್ನು ಕಾಪಾಡುವುದು ನಮ್ಮ ಹಕ್ಕು. ಬಿಜೆಪಿಯು ತನ್ನ ಲೋಪಗಳನ್ನು ಮುಚ್ಚಿಕೊಳ್ಳಲು ಇಂತಹ ಸುಳ್ಳು ವಿಚಾರಗಳನ್ನು ವಿಚಾರ ಮುನ್ನೆಲೆಗೆ ತರುತ್ತಿದೆ” ಎಂದರು.

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಯಾವ ಆಧಾರದಲ್ಲಿ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿದಾಗ, “ರಾಜ್ಯದ ಹಿಂದುಳಿದ ವರ್ಗಗಳ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೀಸಲಾತಿ ವಿಚಾರವಾಗಿ ನ್ಯಾಯಲಯಗಳ ಮೆಟ್ಟಿಲೇರಲಾಗಿದ್ದು, ಆ ನ್ಯಾಯಾಲಯಗಳ ತೀರ್ಪುಗಳ ಆಧಾರದ ಮೇಲೆ ಕೆಲವು ಬದಲಾವಣೆ ಮಾಡಿ ಅವಕಾಶ ನೀಡಲಾಗಿದೆ” ಎಂದು ತಿಳಿಸಿದರು.

ಬಿಜೆಪಿಯ ಸಂಬಿತ್ ಪಾತ್ರ ಅವರು ಇದು ನಿಜವಾದ ಕಾಂಗ್ರೆಸ್ ಚಿಂತನೆ, ಸೋನಿಯಾ ಗಾಂಧಿ ಕುಟುಂಬದ ಚಿಂತನೆ ಎಂದು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಗಾಂಧಿ ಕುಟುಂಬದ ಹೆಸರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಪ್ರತಿದಿನ ನಿದ್ದೆ ಬರುವುದಿಲ್ಲ. ಇದೆಲ್ಲವೂ ಹುಚ್ಚುತನ, ಮೂರ್ಖತನ. ಇದು ಕಾಂಗ್ರೆಸ್ ಪಕ್ಷ ಹಾಗೂ ನನ್ನ ವಿರುದ್ದದ ರಾಜಕೀಯ ಪಿತೂರಿ” ಎಂದು ಕಿಡಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X