ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಮೂವರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ತುಂಡಾಗಿದ್ದು, ವ್ಯಕ್ತಿ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ (35) ಎಂದು ಗುರುತಿಸಲಾಗಿದೆ.
ಹೊಸಪೇಟೆ ತಾಲೂಕಿನ ಕಡ್ಡಿರಾಂಪೂರ ಹೋಬಳಿಯ ಕೊಟಗಿನಹಾಳ್ ಬಳಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ಉರುಳಿ ಬಿದ್ದು ಹಿಂಬದಿ ಕುಳಿತಿದ್ದ ಶ್ವೇತಾಬಾಯಿ (28) ಎಗರಿ ಬಿದ್ದು ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಪಘಾತದಿಂದ ಪಾರು; ಚಾಲಕನ ವಿರುದ್ಧ ಪ್ರಕರಣ; ಪಾದಚಾರಿ ಮಹಿಳೆಗೂ ದಂಡ!
ಕಮಲಾಪೂರ ಬಳಿ ಕಾರು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಹೋಬಳಿಯ ಅಂಬೇಡ್ಕರ್ ವೃತ್ತದ ಬಳಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟವರು ವೆಂಕಟಾಪೂರ ಗ್ರಾಮದ ಕೆಂಚಪ್ಪ (65) ಎಂದು ಗುರುತಿಸಲಾಗಿದೆ. ಕಾರು ಚಾಲಕಿ ಆಲವೇಲು ಎಂಬುವವರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಕಮಲಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.