ಸರ್ಕಾರದಿಂದ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪ

Date:

Advertisements

ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯುವ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದರ ಅವರು, ಸ್ಪಷ್ಟವಾಗಿ ಇಂತಹ ನಾಯಕರ ಫೋನ್‌ ಕಾಲ್‌ಗಳನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಹೇಳಲಿಲ್ಲ. ಇದು ಗಾಳಿಯಲ್ಲಿನ ಗುಂಡಾ ಎಂಬುದಕ್ಕೆ ಅವರೇ ಉತ್ತರಿಸಬೇಕು.

ಹನಿಟ್ರ್ಯಾಪ್‌ ವಿಚಾರವಾಗಿ ಮಾತನಾಡಿ, “ಸಚಿವ ರಾಜಣ್ಣ ಹಾಗೂ ಅವರ ಮಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್‌ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ” ಎಂದರು.

Advertisements

“ಈ ಅಧಿವೇಶನದಲ್ಲಿ ಬಿಜೆಪಿ ಅನೇಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ” ಎಂದು ಟೀಕಿಸಿದರು.

“18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್‌.ಎಲ್‌.ಧರ್ಮೇಗೌಡ ಅವರನ್ನು ಎಳೆದು ಅಪಮಾನ ಮಾಡಿದ್ದರು. ಆದರೂ ಬಿಜೆಪಿ ಧರಣಿ ಮಾಡಿದ್ದೇ ತಪ್ಪು ಎನ್ನುತ್ತಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಕ್ಕೆ ಬಿಜೆಪಿ ಪ್ರತಿಭಟಿಸಿದೆ. ಕಾಂಗ್ರೆಸ್‌ ಚಿತಾವಣೆಯಿಂದ ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಹಿಂದಿನ ಯಾವುದೇ ಸ್ಪೀಕರ್‌ ಈ ರೀತಿ ದೀರ್ಘಾವಧಿಯ ಅಮಾನತು ಮಾಡಿಲ್ಲ” ಎಂದರು.

“ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ” ಎಂದು ಹೇಳಿದರು.

“ಸಂವಿಧಾನ ರಚನಾ ಸಭೆಯಲ್ಲಿ ಮುಸ್ಲಿಮ್‌ ಮೀಸಲಾತಿಗೆ ವಿರೋಧ ಕೇಳಿಬಂದಿತ್ತು. ತಜ್ಮುಲ್ಲಾ ಹುಸೇನ್‌ ಎಂಬ ನಾಯಕರು ಮುಸ್ಲಿಮ್‌ ಮೀಸಲಾತಿಯನ್ನು ವಿರೋಧಿಸಿದ್ದರು. ಈಗ ಕಾಂಗ್ರೆಸ್‌ ವೋಟ್‌ಬ್ಯಾಂಕ್‌ಗಾಗಿ ಮೀಸಲಾತಿ ನೀಡಿದೆ. ಹಿಂದೂ-ಮುಸ್ಲಿಂ ನಡುವೆ ಒಡಕು ತಂದು ಬ್ರಿಟಿಷರ ಕೆಲಸವನ್ನು ಕಾಂಗ್ರೆಸ್‌ ಮುಂದುವರಿಸುತ್ತಿದೆ. ಗುತ್ತಿಗೆಯಲ್ಲಿನ ಮೀಸಲಾತಿಯಿಂದಾಗಿ ಇದರಿಂದಾಗಿ ಹಿಂದೂಗಳಿಗೆ ಅವಕಾಶ ಕಡಿಮೆಯಾಗಿದೆ. ಈಗಾಗಲೇ ಗುತ್ತಿಗೆದಾರರಲ್ಲಿ ಮುಸ್ಲಿಮರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್‌ ವಿರೋಧಿಸಿದ್ದರು. ಇದನ್ನು ಕೂಡ ಕಾಂಗ್ರೆಸ್ ಹೇಳಬೇಕು” ಎಂದರು.

ಗ್ಯಾರಂಟಿ ಸಮಿತಿಗೆ ವಿರೋಧ

“ಗ್ಯಾರಂಟಿ ಯೋಜನೆಯನ್ನು ಜನರಿಗೆ ನೇರವಾಗಿ ನೀಡುವುದು ಬಿಟ್ಟು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಅಧಿಕಾರಿಗಳೇ ಇರುವಾಗ ಕಾರ್ಯಕರ್ತರು ಸಭೆ ನಡೆಸುವುದು ಏಕೆ? ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ 150 ಕೋಟಿ ರೂ. ನಷ್ಟವಾಗಲಿದೆ. ಇವರು ಏಜೆಂಟ್‌ಗಳಂತೆ ಕೆಲಸ ಮಾಡಲಿದ್ದಾರೆ. ಇದರ ವಿರುದ್ಧ ಬಿಜೆಪಿ ಅಧಿವೇಶನದಲ್ಲಿ ಹೋರಾಟ ಮಾಡಿದೆ” ಎಂದರು.

“ಲೋಕಸೇವಾ ಆಯೋಗದ ಅಕ್ರಮ, ದಲಿತರ ಹಣ ವರ್ಗಾವಣೆ ಬಗ್ಗೆಯೂ ಅಧಿವೇಶನದಲ್ಲಿ ಮಾತನಾಡಿದ್ದೇನೆ. ಎಸ್‌ಸಿಎಸ್ಟಿ /ಟಿಎಸ್‌ಪಿ ಹಣ ವರ್ಗಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ತಪ್ಪಾಗಿ ಉತ್ತರ ನೀಡಿದ್ದಾರೆ. ಹುಲಿ ಯೋಜನೆಗೂ ಈ ಹಣ ಬಳಸಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಜನರ ಮುಂದೆ ಬೆತ್ತಲಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ನಿಗಮಗಳಿಗೆ 1,600 ಕೋಟಿ ರೂ. ಹಣ ಕಡಿತವಾಗಿರುವುದರಿಂದ ಮೈಕ್ರೋ ಫೈನಾನ್ಸ್‌ಗಳಿಂದ ಜನರು ಸಾಲ ಪಡೆದಿದ್ದಾರೆ. ಆದರೆ ಸರ್ಕಾರ ಕಾನೂನು ತಂದು ಸುಮ್ಮನಾಗಿದೆ. ಕಾನೂನು ತಂದ ಬಳಿಕವೂ ಆತ್ಮಹತ್ಯೆ ನಡೆದಿದೆ. ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಿರುವುದರ ಬಗ್ಗೆಯೂ ಪ್ರಶ್ನೆ ಮಾಡಿದ್ದೇನೆ. ವಿವಿಗಳ ವಿಚಾರದಲ್ಲಿ ಸರ್ಕಾರ ನಿರಾಸಕ್ತಿ ತೋರಿಸಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X