ಹಾಲಿನ ದರ ಏರಿಕೆ | ರೈತರಿಗೆ ಸಂಪೂರ್ಣ ಹಣ ವರ್ಗಾವಣೆ ನಿಲುವಿಗೆ ಅಂಟಿಕೊಂಡ ಸಿ.ಎಂ

Date:

Advertisements

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲಕ್ಕಾಗಿ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದು, ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿದಂತೆ ಕಾಣುತ್ತಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಸೋಮವಾರ ಸಭೆ ನಡೆಸಿದರು.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

Advertisements

“ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು”ಎಂದು ಸಿಎಂ ಸೂಚಿಸಿದ್ದಾರೆ.

“ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಅನುಕೂಲವಾಗುತ್ತದೆ ಎಂದು ಒಕ್ಕೂಟಗಳು ಮನವಿ ಮಾಡಿದರೂ ಇದಕ್ಕೆ ಸಿಎಂ ಒಪ್ಪಿಗೆ ಸೂಚಿಸಿಲ್ಲ.

ಒಂದು ವೇಳೆ ಹಾಲಿನ ದರ ಹೆಚ್ಚಳವಾದರೆ ಆ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಸಿಎಂ ಅಂಟಿಕೊಂಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಸಭೆ ನಿರ್ಣಯಿಸಲಿದೆ.

“ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಸಚಿವ ಕೆ.ವೆಂಕಟೇಶ್ ವಿಧಾನ ಪರಿಷತ್‌ನಲ್ಲಿ ಇತ್ತೀಚೆಗೆ ತಿಳಿಸಿದ್ದರು. ನಂದಿನಿ ಹಾಲಿನ ದರ ಲೀಟರ್‌ಗೆ ಕನಿಷ್ಠ 5 ರೂಪಾಯಿ ಏರಿಕೆ ಸಾಧ್ಯತೆ ಇದೆ ಎಂದು ಎನ್ನುವ ಮಾತುಗಳು ಕೇLಈಬಂದಿದ್ದವು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X