ಉಡುಪಿ | ಆಸ್ತಿಗಾಗಿ ಹೆಣ್ಮಕ್ಕಳ ಕಾಟ, ಬೀದಿಪಾಲಾದ ತಾಯಿ, ಮಗನ ರಕ್ಷಣೆ

Date:

Advertisements

ಆರು ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ ಮಂಜುನಾಥ ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿಯವರು ರಕ್ಷಿಸಿದ್ದಾರೆ.

ವೃದ್ಧೆ ಜಯಮ್ಮ ಅವರನ್ನು ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಗಿದ್ದು, ಅನಾರೋಗ್ಯ ಪೀಡಿತ ಮಂಜುನಾಥನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಯಮ್ಮ ಅವರ ಗಂಡ ಕೊರೊನಾ ಸಂದರ್ಭದಲ್ಲಿ ತೀರಿಕೊಂಡಿದ್ದು, ನಂತರ ಆಸ್ತಿ ವಿಚಾರದಲ್ಲಿ ಈಕೆಯ ನಾಲ್ಕು ಮಂದಿ ಹೆಣ್ಮಕ್ಕಳು ಇನ್ನಿಲ್ಲದ ತಗಾದೆ ತೆಗೆದಿದ್ದಾರೆ. ಅವರು ದಿನನಿತ್ಯ ನೀಡುತ್ತಿರುವ ಹಿಂಸೆ ತಾಳಲಾರದೆ ಅನಾರೋಗ್ಯ ಪೀಡಿತ ಮಗನೊಂದಿಗೆ ಬೀದಿ ಪಾಲಾದೆ ಎಂದು ಆಕೆ ತಿಳಿಸಿದ್ದಾರೆ. ಹೆಣ್ಮಕ್ಕಳ ಇಚ್ಚೆಯಂತೆ ಆಸ್ತಿಯನ್ನು ಕೊಡಲು ನನಗೆ ಸಾಧ್ಯವಿಲ್ಲ. ಹೀಗಾಗಿ ನನ್ನೆಲ್ಲಾ ಆಸ್ತಿಪಾಸ್ತಿಯ ದಾಖಲೆಗಳೊಂದಿಗೆ ಮನೆ ಬಿಟ್ಟು ಬಂದಿದ್ದೇನೆ. ನನ್ನನ್ನು ಯಾವುದಾದರೂ ಆಶ್ರಮಕ್ಕೆ ಸೇರಿಸಿ, ಹಿಂಸೆಯಿಂದ ಪಾರುಮಾಡಿ ಎಂದು ಆಕೆ ಅಂಗಲಾಚಿದ್ದಾರೆ.

Advertisements

ಸತ್ಯ ಅಸತ್ಯತೆಯ ಬಗ್ಗೆ ಏನನ್ನು ಹೇಳಲಾಗುವುದಿಲ್ಲ. ವೃದ್ದಪ್ಯದ ಸಮಯದಲ್ಲಿ ಈ ರೀತಿ ಬೀದಿಪಾಲಾಗುವುದು ಸರಿಯಲ್ಲ. ವೃದ್ದೆಗೆ ಸಂಬಂಧಪಟ್ಟವರು ಸರಿಯಾದ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X