ಬೀದರ್‌ | ಬೊಮ್ಮಗೊಂಡೇಶ್ವರ ತತ್ವಗಳ ಪ್ರಚಾರ ಆಗಲಿ : ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

Date:

Advertisements

ಮಹಾತ್ಮ ಬೊಮ್ಮಗೊಂಡೇಶ್ವರ ತತ್ವಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವದಲ್ಲಿ ಅವರು ಮಾತನಾಡಿ, ʼಎಲ್ಲರೂ ಬೊಮ್ಮಗೊಂಡೇಶ್ವರ ಇತಿಹಾಸ ಅರಿಯಬೇಕು. ಅವರ ಆದರ್ಶ ತತ್ವಗಳನ್ನು ಪಾಲಿಸಬೇಕುʼ ಎಂದು ತಿಳಿಸಿದರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ʼಬೊಮ್ಮಗೊಂಡೇಶ್ವರ ಕುರಿತು ಹೆಚ್ಚಿನ ಕೃತಿಗಳು ಹೊರ ಬರಬೇಕುʼ ಎಂದು ಹೇಳಿದರು.‌

Advertisements

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಮಾತನಾಡಿ, ʼಬೊಮ್ಮಗೊಂಡೇಶ್ವರ ಜೀವನ ಮತ್ತು ಸಾಧನೆಗಳನ್ನು ಯುವ ಪೀಳಿಗೆಗೆ ತಿಳಿಸಲು ಉತ್ಸವ ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಉತ್ಸವ ಯಶಸ್ವಿಯಾಗಿದೆʼ ಎಂದು ತಿಳಿಸಿದರು.

ಮಹಾತ್ಮ ಬೊಮ್ಮಗೊಂಡೇಶ್ವರ ಪ್ರಶಸ್ತಿ ಸ್ವೀಕರಿಸಿದ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ.ಎಂ. ಮೇತ್ರಿ ಅವರು ಬೊಮ್ಮಗೊಂಡೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

WhatsApp Image 2025 03 25 at 6.38.33 AM

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬಿಡಿಎ ಮಾಜಿ ಅಧ್ಯಕ್ಷ ಮುರಳಿಧರ ಎಕಲಾರಕರ್ ಮಾತನಾಡಿದರು. ಸಾಹಿತಿ ಸುನಿತಾ ಕೂಡ್ಲಿಕರ್ ರಚಿತ ಸಾಂಸ್ಕೃತಿಕ ವೀರ ಬೊಮ್ಮಗೊಂಡೇಶ್ವರ ಕೃತಿ ಬಿಡುಗಡೆ ಮಾಡಲಾಯಿತು.

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ನಾಟ್ಯಶ್ರೀ ನೃತ್ಯಾಲಯ ಹಾಗೂ ವಿವಿಧ ಕಲಾ ತಂಡಗಳ ಕಲಾವಿದರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರ ಮನರಂಜಿಸಿತು.

ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಉತ್ಸವವನ್ನು ಉದ್ಘಾಟಿಸಿದರು. ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಕನಕ ಗುರುಪೀಠ ತಿಂಥಣಿ ಬ್ರಿಡ್ಜ್‍ನ ಬೀರಲಿಂಗದೇವರು, ಸಿದ್ಧಯ್ಯ ಆಧುನಿಕ ಒಡೆಯರ್, ಭಂತೆ ಸಂಘರಖ್ಖಿತ, ಉಚ್ಚಾದ ಬಾಲ ತಪಸ್ವಿ ಗೋಪಾಲ್ ಮುತ್ಯಾ, ಸರ್ದಾರ್ ಮನ್‍ಮೀತ್ ಸಿಂಗ್ ಗ್ರಂಥಿ ಮುಖಂಡರಾದ ಪಂಡಿತರಾವ್ ಚಿದ್ರಿ, ಗೀತಾ ಚಿದ್ರಿ, ಮಲ್ಲಿಕಾರ್ಜುನ ಬಿರಾದಾರ (ಪರಿಹಾರ), ಬಸವರಾಜ ಧನ್ನೂರ, ಸೋಮಶೇಖರ ಬಿರಾದಾರ, ಮಾಳಪ್ಪ ಅಡಸಾರೆ, ಸುರೇಶ್ ಚನಶೆಟ್ಟಿ, ಡಾ. ಸುಚಿತಾನಂದ್ ಮಲ್ಕಾಪುರೆ, ಡಾ. ಜಿ.ಬಿ. ಮಲ್ಲಿಕಾರ್ಜುನ, ಬಾಬುರಾವ್ ಬರಿದಾಬಾದ್, ಸಂಜೀವಕುಮಾರ ಅತಿವಾಳೆ, ದೇವಪ್ಪ ಜಾಂಬೋಳೆ, ವಿಜಯಕುಮಾರ ಸೋನಾರೆ, ಡಾ. ರಾಜಕುಮಾರ ಹೆಬ್ಬಾಳೆ, ಸುಭಾಷ್ ನಾಗೂರೆ, ಡಾ. ಶರಣಪ್ಪ ಮಲಗೊಂಡ, ಪ್ರಕಾಶ ದೇಶಮುಖ, ಹಣಮಂತ ಮಲ್ಕಾಪುರ, ವಿಜಯಕುಮಾರ ಡುಮ್ಮೆ, ವಿಜಯಕುಮಾರ ಮಲ್ಕಾಪುರೆ, ರವಿ ದುರ್ಗೆ, ಬಾಬುರಾವ್ ಕಾಶೆಂಪುರೆ, ಕೆ.ಡಿ. ಗಣೇಶ್, ಕಲ್ಲಪ್ಪ ರಾಯಗೊಂಡ, ತುಕಾರಾಮ ಚಿಮಕೋಡೆ, ಸಚಿನ್ ಮಲ್ಕಾಪುರ, ಮಲ್ಲಿಕಾರ್ಜುನ್ ಮುರ್ಕಿ, ಎಂ.ಪಿ. ವೈಜಿನಾಥ, ಸಿದ್ದು ಬಾವಗಿ ಮತ್ತಿತರರು ಇದ್ದರು. ನಾಗಪ್ಪ ಜಾನಕನೋರ ನಿರೂಪಿಸಿದರು. ವಿಜಯಕುಮಾರ ಬ್ಯಾಲಹಳ್ಳಿ ಸ್ವಾಗತಿಸಿದರು. ಸುನಿಲ್ ಚಿಲ್ಲರ್ಗಿ ವಂದಿಸಿದರು.

ಬೊಮ್ಮಗೊಂಡೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ :

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವ ನಿಮಿತ್ತ ನಗರದಲ್ಲಿ ಅಲಂಕೃತ ರಥದಲ್ಲಿ ಬೊಮ್ಮಗೊಂಡೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

WhatsApp Image 2025 03 25 at 6.38.44 AM

ಬೊಮ್ಮಗೊಂಡೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‍ಸಿಂಗ್ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಗುದಗೆ ಆಸ್ಪತ್ರೆ ಕ್ರಾಸ್, ರೋಟರಿ ಕನ್ನಡಾಂಬೆ ವೃತ್ತದ ಮೂಲಕ ಹಾಯ್ದು ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರಕ್ಕೆ ತಲುಪಿ ಸಮಾರೋಪಗೊಂಡಿತು.

ಪುಷ್ಪಗಳಿಂದ ಶೃಂಗರಿಸಿದ್ದ ರಥದಲ್ಲಿ ಬೊಮ್ಮಗೊಂಡೇಶ್ವರ ಬೃಹತ್ ಭಾವಚಿತ್ರ ಇಡಲಾಗಿತ್ತು. ಡೊಳ್ಳು ಕುಣಿತ, ಲಂಬಾಣಿ ನೃತ್ಯ, ಬ್ಯಾಂಡ್, ಕೋಲಾಟ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಿದವು.

ಬೊಮ್ಮಗೊಂಡೇಶ್ವರ ವೇಷಧಾರಿಗಳು ನೋಡುಗರ ಗಮನ ಸೆಳೆದರು. ಮೆರವಣಿಗೆಯಲ್ಲಿ ಪಾಲ್ಗೊಂಡವರು ತಲೆ ಮೇಲೆ ಹಳದಿ ಟೊಪ್ಪಿಗೆ ಹಾಗೂ ಕೊರಳಲ್ಲಿ ಶಲ್ಯ ಧರಿಸಿದ್ದರು. ಗಣ್ಯರು, ಯುವಕರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಮೆರವಣಿಗೆ ಉದ್ದಕ್ಕೂ ಮಹಾತ್ಮ ಬೊಮ್ಮಗೊಂಡೇಶ್ವರರಿಗೆ ಜಯವಾಗಲಿ ಎಂಬ ಘೋಷಣೆ ಮೊಳಗಿದವು. ಭಂಡಾರ ಹಾರಿಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ನೇತೃತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹುಲಸೂರ ಬಂದ್‌ ಭಾಗಶಃ ಯಶಸ್ವಿ : ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ, ಬಿಡಿಎ ಮಾಜಿ ಅಧ್ಯಕ್ಷ ಮುರಳಿಧರ ಎಕಲಾಕರ್, ಮುಖಂಡರಾದ ಬಾಬುರಾವ್ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ(ಪರಿಹಾರ), ಮಾಳಪ್ಪ ಅಡಸಾರೆ, ಎಂ.ಎಸ್. ಕಟಗಿ, ದೇವಪ್ಪ ಚಾಂಬೋಳೆ, ಸುಭಾಷ್ ನಾಗೂರೆ, ಪಿ.ಎಸ್. ಇಟಕಂಪಳ್ಳಿ, ಕಲ್ಲಪ್ಪ ರಾಯಗೊಂಡ, ಮಲ್ಲಿಕಾರ್ಜುನ ಮುರ್ಕೆ, ಉದಯಕುಮಾರ ಬ್ಯಾಲಹಳ್ಳಿ, ಎಂ.ಪಿ. ವೈಜಿನಾಥ, ಸುನೀಲ್ ಚಿಲ್ಲರ್ಗಿ, ಗೋವಿಂದ ದುರ್ಗೆ, ಶಿವಕುಮಾರ ಹಾಲಹಿಪ್ಪರ್ಗಾ, ಲೋಕೇಶ ಮರ್ಜಾಪುರ, ಕಲ್ಲಪ್ಪ ಯರನಳ್ಳಿ, ಕಾಮಶೆಟ್ಟಿ ಘೋಡಂಪಳ್ಳಿ ಮತ್ತಿತರರು ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯ ಗೊಂಡ ಸಮುದಾಯದ ಪ್ರತಿನಿಧಿಗಳು ಹಾಗೂ ಬೊಮ್ಮಗೊಂಡೇಶ್ವರ ಅನುಯಾಯಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X