ಕಲಬುರಗಿ ಜಿಲ್ಲೆಯ 2,04,073 ರೈತರಿಗೆ ₹667.73 ಪರಿಹಾರ : ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ 

Date:

Advertisements

ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಣಿ ಮಾಡಿಕೊಂಡಿದ್ದ 2,04,073 ರೈತರಿಗೆ ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ʼಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ₹667.73 ಕೋಟಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ದಾಖಲೆ ಸೃಷ್ಟಿಸಲಾಗಿದೆʼ ಎಂದು ಮಾಹಿತಿ ನೀಡಿದ್ದಾರೆ.

ʼಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದಾರೆ. ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ₹76.34 ಕೋಟಿ ಪರಿಹಾರ ಈಗಾಗಲೇ ನೀಡಲಾಗಿದೆʼ ಎಂದು ಸಚಿವರು ಹೇಳಿದ್ದಾರೆ.

Advertisements

ʼರೈತವಾರು ಮಾಹಿತಿಯನ್ನು ಸಂರಕ್ಷಣಾ ಪೋರ್ಟಲ್‌ನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೀಯೇ ಬೆಳೆ ವಿಮೆ ಪರಿಹಾರ ರೈತರ ಖಾತೆಗೆ ನೇರವಾಗಿ ಜಮೆಯಾಗಲಿದೆʼ ಎಂದು ಸಚಿವರು ತಿಳಿಸಿದ್ದಾರೆ.

ʼಜಿಲ್ಲೆಯ ರೈತರು ಬೆಳೆಯುತ್ತಿರುವ ತೊಗರಿಗೆ ಕ್ವಿಂಟಲ್‌ಗೆ ₹7550 ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‍ಗೆ ₹450 ಪ್ರೋತ್ಸಾಹಧನವನ್ನು ನಿಗದಿ ಮಾಡಿದೆ. ಜಿಲ್ಲೆಯ 9,189 ರೈತರಿಗೆ ₹108.30 ಕೋಟಿ ಸಹಾಯಧನವನ್ನು ವಿತರಿಸಲಾಗಿದೆʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನಿಲ್ಲದ ರೈತರ ಆತ್ಮಹತ್ಯೆ : 2 ವರ್ಷದಲ್ಲಿ 100 ಅನ್ನದಾತರ ಸಾವು

ʼ2024-25ನೇ ಸಾಲಿನಲ್ಲಿ ಆಗಸ್ಟ್‌ ಕೊನೆಯ ವಾರ ಹಾಗೂ ಸೆಪ್ಟೆಂಬರ್ ತಿಂಗಳ ಮೊದಲನೇ ವಾರದಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಒಟ್ಟು 16,373 ಹೆಕ್ಟೇರ್‌ನಷ್ಟು ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಬರ ಪರಿಹಾರ ನಿಧಿ ಮಾರ್ಗಸೂಚಿಯಂತೆ 35,086 ರೈತರಿಗೆ ₹13.47 ಕೋಟಿ ಪರಿಹಾರವನ್ನು ನೀಡಲಾಗಿದೆʼ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X