ನೈರ್ಮಲ್ಯ ಕಾರ್ಮಿಕರ ಸಮವಸ್ತ್ರದಲ್ಲಿ ನಗರದ ಯೂಟ್ಯೂಬರ್ ಸವುಕ್ಕು ಶಂಕರ್ ಎಂಬುವವರ ಮನೆಗೆ ನುಗ್ಗಿದ ಗುಂಪೊಂದು ಅವರ ಮನೆಯ ಕೊಠಡಿ, ಅಡುಗೆಮನೆ ಮತ್ತು ಹಜಾರದಲ್ಲಿ ಬಕೆಟ್‍ಗಟ್ಟಲೆ ಕೆಸರು, ಹೊಲಸು ಮತ್ತು ಮಲ ಸುರಿದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಚೆನ್ನೈನ ನಗರವೊಂದರಲ್ಲಿ ಬೆಳಕಿಗೆ ಬಂದಿದೆ.
ನೈರ್ಮಲ್ಯ ಕಾರ್ಮಿಕರ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯವನ್ನು ವಿರೋಧಿಸಿ ಈ ದಾಳಿ ನಡೆದಿರಬೇಕು ಎಂದು ಶಂಕಿಸಲಾಗಿದೆ. ಶಂಕರ್ ಅವರ ತಾಯಿ ಕಮಲಾ ಒಬ್ಬರೇ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿದ ಗುಂಪು, ಮನೆಯನ್ನು ಲೂಟಿ ಮಾಡಿ, ಇದೇ ಬಗೆಯ ಅಭಿಪ್ರಾಯವನ್ನು ಮಗನ ಮುಂದೆ ವ್ಯಕ್ತಪಡಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಮಹಿಳೆಯ ಫೋನ್ ಕಿತ್ತುಕೊಂಡು, ಶಂಕರ್‌ಗೆ ವಿಡಿಯೋ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಯಿತು. ಈ ಸಂದರ್ಭದಲ್ಲಿ “ನನ್ನ ಮಗನ ವಿರುದ್ಧ ಯಾವುದೇ ಸಮಸ್ಯೆ ಇದ್ದಲ್ಲಿ, ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಿತ್ತು” ಎಂದು ಕಮಲಾ ಪ್ರತಿಕ್ರಿಯಿಸಿದ್ದಾರೆ.
ತಕ್ಷಣವೇ ಪೊಲೀಸರು ಧಾವಿಸಿದರು. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ದಾಳಿಕೋರರನ್ನು ಪತ್ತೆ ಮಾಡಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ವಿನಾಶ: ಆರ್‌ಎಸ್‌ಎಸ್ ಬೂಟಾಟಿಕೆಗೆ ಮಿತಿ ಇಲ್ಲವೇ?
ನೈರ್ಮಲ್ಯ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪವನ್ನು ಶಂಕರ್ ಅಲ್ಲಗಳೆದಿದ್ದಾರೆ. “ನಿಜವಾಗಿ ನೈರ್ಮಲ್ಯ ಕಾರ್ಮಿಕರಿಗೆ ಸಲ್ಲಬೇಕಾದ ಹಣವನ್ನು ಶಾಸಕರು ಒಯ್ದಿದ್ದಾರೆ ಎಂದು ನಾನು ಬಿಂಬಿಸಿದ್ದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಶಂಕರ್ ಮನೆಯ ಮೇಲಿನ ದಾಳಿಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.