ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿ ಶಿವಕುಮಾರ (46), ಕೆ ಆರ್ ಪೇಟೆ ತಾಲ್ಲೂಕಿನ ಕಾಗೇಪುರ ಗ್ರಾಮದವರು. ಅರಸೀಕೆರೆ ಮಾರ್ಗದಿಂದ ಬರುತ್ತಿದ್ದ KA-19-B-5207 ನಂಬರಿನ ಆಲ್ಟೋ ಕಾರು ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಇದನ್ನು ಓದಿದ್ದೀರಾ?ಹಾಸನ l ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಯಶಸ್ವಿ; ಮಕ್ನಾ ಕಾಡಾನೆ ಸೆರೆ
ಉಳಿದ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ, ಗಾಯಾಳುಗಳಿಗೆ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
