ಬಳ್ಳಾರಿ | ಜಿಲ್ಲೆಯನ್ನು ಕ್ಷಯಮುಕ್ತ ಮಾಡಲು ಕೈಜೋಡಿಸಿ: ಶಾಸಕಿ ಅನ್ನಪೂರ್ಣ

Date:

Advertisements

ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಲು ಸಂಡೂರು ಶಾಸಕಿ ಈ. ಅನ್ನಪೂರ್ಣ ಕರೆ ನೀಡಿದರು.

‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ನಗರದ ಬಿಮ್ಸ್ ನ ವೈದ್ಯ ಭವನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕ್ಷಯವು ಚಿಕ್ಕ ಮಕ್ಕಳಿನಿಂದ ಹಿರಿಯ ವಯಸ್ಸಿನವರಿಗೂ ಬಾಧಿಸುವಂತಹ ರೋಗವಾಗಿದೆ. ಹೆಚ್ಚಾಗಿ ಧೂಳಿನಿಂದ ಕೂಡಿದ ಪ್ರದೇಶದಲ್ಲಿ ಕೆಲಸ ಮಾಡುವವರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೂ ಸಹ ಬರಬಹುದಾಗಿದೆ. ಗ್ರಾಮೀಣ ಪ್ರದೇಶದ ಜನತೆ ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದ್ದು, ಈ ದಿಸೆಯಲ್ಲಿ ಸೂಕ್ತ ಜಾಗೃತಿ ನೀಡಬೇಕು. ಜೊತೆಗೆ ಕ್ಷಯರೋಗವನ್ನು ಸಕಾಲದಲ್ಲಿ ಗುರುತಿಸುವ ಕಾರ್ಯದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಆಶಾಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ” ಎಂದರು.

Advertisements
WhatsApp Image 2025 03 25 at 10.13.30 AM

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿ, “ಕ್ಷಯರೋಗವು ಹಿಂದಿನ ಕಾಲದಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಪ್ರಸ್ತುತದಲ್ಲಿ ಆಧುನಿಕ ತಂತ್ರಜ್ಞಾನವುಳ್ಳ ಯಂತ್ರಗಳು ಲಭ್ಯವಿದ್ದು, ಸಕಾಲದಲ್ಲಿ ಗುರುತಿಸಿ ತ್ವರಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ” ಎಂದು ಹೇಳಿದರು.

“ಜಿಲ್ಲೆಯಲ್ಲಿ ಕ್ಷಯ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿವೆ. ಸಂಪೂರ್ಣವಾಗಿ ಕಡಿಮೆ ಮಾಡಲು ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಕೈಜೋಡಿಸಬೇಕು. ಕ್ಷಯ ಲಕ್ಷಣ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬೇಕು. ಬಳಿಕ ಶೀಘ್ರವಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಹೇಳಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಮಾತನಾಡಿ, “ಜಿಲ್ಲೆಯಲ್ಲಿ ಈಗಾಗಲೇ ಕ್ಷಯವನ್ನು ತ್ವರಿತವಾಗಿ ಪತ್ತೆಹಚ್ಚಲು ಸಿಬಿನ್ಯಾಟ್ ಯಂತ್ರಗಳನ್ನು ಬಿಮ್ಸ್, ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಹಾಗೂ ಟ್ರುನ್ಯಾಟ್ ಮಿಷನ್ ಗಳನ್ನು ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅನುಷ್ಠಾನ ಮಾಡಲಾಗಿದ್ದು, ರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಕಾರಿಯಾಗಿದ್ದು, ಚಿಕಿತ್ಸೆ ಪೂರ್ಣಗೊಂಡು ಗುಣಮುಖರಾಗುವ ಪ್ರಮಾಣ ಶೇ.85 ರಷ್ಟಿದ್ದು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳಲ್ಲಿ ಬಳ್ಳಾರಿ ಜಿಲ್ಲೆಯು ಒಂದಾಗಿದೆ ಎಂದು ತಿಳಿಸಿದರು.

WhatsApp Image 2025 03 25 at 10.13.29 AM

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2024 ಸಾಲಿಗೆ ಕ್ಷಯಮುಕ್ತ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಮತ್ತು ಆ ವ್ಯಾಪ್ತಿಯ ವೈದ್ಯಾಧಿಕಾರಿಗಳಿಗೆ ಸನ್ಮಾನಿಸಲಾಯಿತು.

ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜನಜಾಗೃತಿ ಜಾಥಾವು ಗಮನ ಸೆಳೆಯಿತು. ವಿವಿಧ ಸಾಂಸ್ಕೃತಿ ಕಲಾತಂಡಗಳನ್ನೊಳಗೊಂಡ ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಘೋಷಣೆ ಕೂಗುವ ಮೂಲಕ ಜಾಗೃತಿ ಮೂಡಿಸಿದರು. ಕ್ಷಯರೋಗ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ರಾರಾಜಿಸಿದವು.

ಜಾಗೃತಿ ಜಾಥಾವು ನಗರದ ಕನಕದಾಸರ ವೃತ್ತದ ಕೆಎಂಎಫ್ ಮುಂಭಾಗದಿಂದ ಆರಂಭಗೊಂಡು ಇನ್ ಫ್ಯಾಂಟರಿ ರಸ್ತೆಯ ಮೂಲಕ ಬಳ್ಳಾರಿ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಕೇಂದ್ರ (ಬಿಮ್ಸ್)ದ ವೈದ್ಯ ಭವನದ ಸಭಾಂಗಣದವರೆಗೆ ಸಾಗಿ ಸಮಾರೋಪಗೊಂಡಿತು.

WhatsApp Image 2025 03 25 at 10.13.30 AM 1

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಡಿ.ಸುಕುಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್ ಸೇರಿದಂತೆ ವಿವಿಧ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಟಿಬಿ ವಿಭಾಗದ ಸಿಬ್ಬಂದಿ, ಟಿಬಿ ಚಾಂಪಿಯನ್ಸ್ ಹಾಗೂ ಬಿಮ್ಸ್ ನ ತರಬೇತುದಾರ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X