ಮಲೆನಾಡಿನಲ್ಲಿ ಗಾಳಿ, ಮಳೆ ಜೋರಾದ ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲ್- ಮರಸಣಿಗೆ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ, ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಕಳಸದಿಂದ ಮೂಡಿಗೆರೆ ತಾಲೂಕಿಗೆ ಹೋಗುವ ಮಾರ್ಗ ತಾತ್ಕಾಲಿಕ ಸ್ಥಗಿತ ಆಗಿತ್ತು, ಕೂಡಲೇ ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ನಡೆಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರೋಪಿ ಬಂಧನ
ಕಳಸ ತಾಲೂಕಿನ ಹಿರೇಬೈಲ್, ಮರಸಣಿಗೆ, ಯಡಿಯೂರು ಸುತ್ತಾಮುತ್ತ ಭಾಗಗಳಲ್ಲಿ ಭಾರೀ ಗಾಳಿ ಮಳೆಯಾಗುತ್ತಿದೆ. ಮಳೆ ಆಗುವ ಪ್ರದೇಶದಲ್ಲಿ ಜನರು ಎಚ್ಚರಿಕೆ ವಹಿಸಬೇಕಾಗುತ್ತದೆ. ಈ ವೇಳೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಇನ್ನಿತರರಿದ್ದರು.
