ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಈದಿನ ಡಾಟ್ ಕಾಮ್‌ನಿಂದ ಮಾರ್ಚ್ 27 ಮತ್ತು 28ರಂದು ‘ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು’ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ
ತುಮಕೂರು ನಗರದ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಅಗಳಕೋಟೆ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಎಸ್‌ಎಸ್‌ಐಟಿ ಕ್ಯಾಂಪಸ್, ಮರಳೂರು, ತುಮಕೂರು ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು(ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಎರಡು ದಿನಗಳ ಕಾರ್ಯಾಗಾರವನ್ನು ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.
ಗುರುವಾರ ಬೆಳಿಗ್ಗೆ 10ರಿಂದ ಆರಂಭವಾಗುವ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ಸಾಹೇ ವಿವಿಯ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ ಅವರು ಉದ್ಘಾಟನೆ ಮಾಡಲಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಿರಿಯ ಪತ್ರಕರ್ತ ಡಿ ಉಮಾಪತಿಯವರು “ಉತ್ತಮ ಪತ್ರಕರ್ತರಾಗುವುದು ಹೇಗೆ? ಮತ್ತು ತಯಾರಿ” ವಿಷಯದ ಕುರಿತು ಮಾತನಾಡಲಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಪೂರ್ಣಾನಂದ್ ಡಿ ಎಸ್, ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರ ಡಾ. ವಿವೇಕ್ ವೀರಯ್ಯ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ ಎಸ್ ರವಿಪ್ರಕಾಶ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹ ಆಡಳಿತಾಧಿಕಾರಿ ಖಲಂದರ್ ಪಾಷ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ ಟಿ ಮುದ್ದೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 2.30 ರಿಂದ 4.00ರವರೆಗೆ ಗೋಷ್ಠಿ ನಡೆಯಲಿದ್ದು, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ರಮೇಶ್ ಮಣ್ಣೆ, ಪತ್ರಕರ್ತರಾದ ಚಂದನ್ ಡಿ.ಎನ್, ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಸಂತೋಷ್ .ಹೆಚ್.ಎಂ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
ಎರಡನೇ ದಿನದ ಕಾರ್ಯಾಗಾರವು ಮಾರ್ಚ್ 28 ಬೆಳಗ್ಗೆ 10 ರಿಂದ 11.30ರವರೆಗೆ ನಡೆಯಲಿದ್ದು, ಡಿಜಿಟಲ್ ಮಾಧ್ಯಮ – ಸಾಮಾಜಿಕ ಪರಿವರ್ತನೆಗೆ ಇರುವ ಹಾದಿಗಳು ಕುರಿತು ಪತ್ರಕರ್ತ ಡಾ. ಎಚ್.ವಿ.ವಾಸು ವಿಷಯ ಮಂಡಿಸಲಿದ್ದಾರೆ. ಮಧ್ಯಾಹ್ನ 2.00 ರಿಂದ 3.30ರವರೆಗೆ ನಡೆಯುವ ಗೋಷ್ಠಿಯಲ್ಲಿ ಫ್ಯಾಕ್ಟ್ಚೆಕ್ – ಯಾವುದು ನಿಜ? ಕುರಿತು ಪತ್ರಕರ್ತರಾದ ಮುತ್ತುರಾಜು ವಿಷಯ ಮಂಡನೆ ಮಾಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬೃಹತ್ ಕಾರ್ಖಾನೆಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ
ಸಂಜೆ 4ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಾರೋಪ ನುಡಿಯನ್ನು ಸಾಹೇ ವಿಶ್ವವಿದ್ಯಾನಿಲಯ, ಕುಲಪತಿಗಳಾದ ಡಾ. ಕೆ.ಬಿ.ಲಿಂಗೇಗೌಡ, ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರವನ್ನು ತುಮಕೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ .ಕೆ.ವಿ ವಿತರಿಸಲಿದ್ದಾರೆ. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಬಿ.ವಿ. ಅಶ್ವಿಜಾ ಭಾಗವಹಿಸಲಿದ್ದಾರೆ.
ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹ್ತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ನಿಯಂತ್ರಕರಾದ ಡಾ. ಜಿ.ಗುರುಶಂಕರ್, ಪತ್ರಕರ್ತರಾದ ಡಾ. ಎಚ್.ವಿ.ವಾಸು, ಭರತ್ ಹೆಬ್ಬಾಳ್, ತುಮಕೂರು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಿ.ಕರಿಯಣ್ಣ, ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ.ಹೇಮಲತಾ, ತುಮಕೂರು ಕಸಾಪ ಜಿಲ್ಲಾಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸಲಿದ್ದಾರೆ. ತುಮಕೂರು ಜಿಲ್ಲೆಯ ವಿವಿಧ ಕಾಲೇಜಿಗಳಿಂದ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಬರುವವರು ಇಲ್ಲಿ ಕ್ಲಿಕ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ +919035053814ಕ್ಕೆ ಸಂಪರ್ಕಿಸಬಹುದು.