ಕರ್ನಾಟಕ ಪಶು ವಿಶ್ವವಿದ್ಯಾಲಯ 14ನೇ ಘಟಿಕೋತ್ಸವ : ಆದಿತ್ಯಗೆ 9, ದಕ್ಷೀತ್‌ಗೆ 6, ಎಲೆಕ್ಟ್ರಿಕಲ್ ವ್ಯಾಪಾರಿ ಮಗಳಿಗೆ 4 ಚಿನ್ನದ ಪದಕ

Date:

Advertisements

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಬೀದರ್ ಹೊರವಲಯದ ಕಮಠಾಣ ರಸ್ತೆಯ ನಂದಿನಗರದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿತು.

2022-23ನೇ ಸಾಲಿನ ʼಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿʼ ಸ್ನಾತಕ ಪದವಿಯಲ್ಲಿ ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಚಿದಾನಂದ ಅವರು 9 ಚಿನ್ನದ ಪದಕಗಳಿಗೆ ಭಾಜನರಾದರು.

ಚಿತ್ರದುರ್ಗದ ರವೀನಾ ಅವರು 15 ಚಿನ್ನದ ಪದಕಗಳ ಸಾಧನೆ ಮಾಡಿದರು. ಆದರೆ ಕೆಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿರುವ ಕಾರಣ ಅವರು ಗೈರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisements
1003279493
ಬೆಂಗಳೂರಿನ ಆದಿತ್ಯ ಅವರಿಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು 9 ಚಿನ್ನದ ಪದಕ , ಪದವಿ ಪ್ರದಾನ ಮಾಡಿದರು.

ಚಿತ್ರದುರ್ಗದ ಚಳ್ಳಕೆರೆಯ ಚಿಕ್ಕೇನಹಳ್ಳಿ ಗ್ರಾಮದವರಾದ ದಕ್ಷೀತ್‌ ಪಿ.ಎಲ್‌. ಅವರು ಎಂವಿಎಸ್‌ಸಿ ಸ್ನಾತಕೋತ್ತರ ಪದವಿಯಲ್ಲಿ 6 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ದಕ್ಷೀತ್ ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 2022–23ನೇ ಸಾಲಿನಲ್ಲಿ ಈ ಸಾಧನೆಗೈದಿದ್ದಾರೆ.

ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಎಲೆಕ್ಟ್ರಿಕಲ್ ವ್ಯಾಪಾರಿ ಹನುಮಂತಪ್ಪ ಅವರ ಮಗಳಾದ ಭಾಗ್ಯಶ್ರೀ ಅವರು ‘ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್‌ ಎಎಚ್‌) ಸ್ನಾತಕ ಪದವಿಯಲ್ಲಿ 4 ಚಿನ್ನದ ಪದಕಗಳ ಸಾಧನೆ ಮಾಡಿದ್ದಾರೆ.

ಭಾಗ್ಯಶ್ರೀ ಅವರು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಧ್ಯಾರ್ಥಿನಿಯಾಗಿದ್ದಾರೆ.

1003279494
ಚಿತ್ರದುರ್ಗದ ದಕ್ಷೀತ್ ಅವರಿಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು 4 ಚಿನ್ನದ ಪದಕ , ಪದವಿ ಪ್ರದಾನ ಮಾಡಿದರು.

ಹನುಮಂತಪ್ಪ ಅವರು ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡು ಅದರ ಆದಾಯದಿಂದ ಮಗಳಿಗೆ ಓದಿಸಿದ್ದಾರೆ. ಪೋಷಕರ ನಿರೀಕ್ಷೆಯಂತೆ ಉತ್ತಮ ರೀತಿಯಲ್ಲಿ ಓದುವುದರ ಮೂಲಕ ಮಗಳು 2022-23ನೇ ಸಾಲಿನಲ್ಲಿ ಈ ಸಾಧನೆ ಮಾಡಿದ್ದಾರೆ.

ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ಅವರು ಸ್ನಾತಕ ಪದವಿಯಲ್ಲಿ 16 ವಿದ್ಯಾರ್ಥಿಗಳಿಗೆ 53 ಚಿನ್ನದ ಪದಕಗಳು, ಸ್ನಾತಕೋತ್ತರ ಪದವಿಯಲ್ಲಿ 21 ವಿದ್ಯಾರ್ಥಿಗಳಿಗೆ 34 ಚಿನ್ನದ ಪದಕಗಳು, ಡಾಕ್ಟರೇಟ್‌ ಪದವಿ ಪೂರೈಸಿದ ಏಳು ವಿದ್ಯಾರ್ಥಿಗಳಿಗೆ ತಲಾ ಒಂದು ಚಿನ್ನದ ಪದಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 96 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.

WhatsApp Image 2025 03 25 at 7.54.16 PM
ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿಗಳು

ಒಟ್ಟು 634 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 419 ಸ್ನಾತಕ ಪದವೀಧರರು, 187 ಸ್ನಾತಕೋತ್ತರ ಹಾಗೂ 28 ಡಾಕ್ಟರೇಟ್ ಪದವೀಧರರು ಸೇರಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮನ್ನ ಹಿಂಗ್ಯಾಕ ನೋಡತಾರಪ ಬೆಂಗ್ಳೂರ್ ಮಂದಿ? (ಭಾಗ-1)

ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ನಿರ್ದೇಶಕ ಡಾ. ನವೀನಕುಮಾರ ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಪ್ರೊ. ಕೆ.ಸಿ. ವೀರಣ್ಣ, ಕುಲಸಚಿವ ಪಿ.ಟಿ. ರಮೇಶ, ಆಡಳಿತ ಮಂಡಳಿ ಸದಸ್ಯರು, ಬೋಧಕ ಸಿಬ್ಬಂದಿ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X