ವಕೀಲರು ಹಾಗೂ ಮಾತಿನ ಚಾತುರ್ಯತೆ ಎಂಬ ಹೆಗ್ಗಳಿಕೆ ಗಳಿಸಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ನೇಮಿಸಲಾಗಿದೆ.

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ನೇಮಿಸಿ ಸಭೆಯ ಉಸ್ತುವಾರಿಯನ್ನು ವಹಿಸಿಕೊಂಡು, ಪರಿಣಾಮಕಾರಿಯಾಗಿ ಪ್ರಚಾರ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ.