ಕರ್ನಾಟಕದಲ್ಲಿ ಟೋಲ್ ಸುಂಕ ಏಪ್ರಿಲ್​ನಿಂದ ಏರಿಕೆ

Date:

Advertisements

ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3 ರಿಂದ 5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್​ಎಚ್​​ಎಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಎನ್‌ಎಚ್‌ಎಐನ ಬೆಂಗಳೂರಿನ ಯೋಜನಾ ನಿರ್ದೇಶಕ ಕೆ ಬಿ ಜಯಕುಮಾರ್ ಮಾಹಿತಿ ನೀಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರ ವೇತನ ಹೆಚ್ಚಳ: ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲವೇ?

ಕರ್ನಾಟಕದಲ್ಲಿ ಸುಮಾರು 66 ಟೋಲ್ ಪ್ಲಾಜಾಗಳಿವೆ. ಟೋಲ್ ಸುಂಕ ಹೆಚ್ಚಾಗುವ ಟೋಲ್ ಪ್ಲಾಜಾಗಳಲ್ಲಿ ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು-ಮೈಸೂರು), ನಂಗ್ಲಿ (ಬೆಂಗಳೂರು-ತಿರುಪತಿ), ಬಾಗೇಪಲ್ಲಿ (ಬೆಂಗಳೂರು-ಹೈದರಾಬಾದ್), ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ), ಮತ್ತು ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಟೋಲ್ ಪ್ಲಾಜಾಗಳು ಸೇರಿವೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಸ್ತೆ ಬಳಕೆದಾರರಿಗೆ ಕೆಲವು ರಿಯಾಯಿತಿಗಳನ್ನು ನೀಡುವ ಉದ್ದೇಶದೊಂದಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಗಳಿಗೆ ಹೊಸ ನೀತಿಯನ್ನು ಪರಿಚಯಿಸಲು ಸಜ್ಜಾಗಿದೆ. ಈ ವಿಚಾರವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾರ್ಚ್ 19 ರಂದು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದರು.

2023-24 ರಲ್ಲಿ ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹ 64,809.86 ಕೋಟಿ ರೂ.ಗಳಷ್ಟಾಗಿತ್ತು. ಇದು ಹಿಂದಿನ ವರ್ಷಕ್ಕಿಂತ ಶೇ 35 ರಷ್ಟು ಹೆಚ್ಚಾಗಿದೆ. 2019-20 ರಲ್ಲಿ ಟೋಲ್ ಶುಲ್ಕ ಸಂಗ್ರಹವು 27,503 ಕೋಟಿ ರೂ.ಗಳಷ್ಟಿತ್ತು ಎಂದು ಗಡ್ಕರಿ ಮಾಹಿತಿ ನೀಡಿದ್ದರು. ಕರ್ನಾಟಕದಲ್ಲಿ 66 ಟೋಲ್ ಪ್ಲಾಜಾಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X