ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲರು

Date:

Advertisements

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಕನಸಿನ ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​​ ವಿರೋಧದ ನಡುವೆ ರಾಜ್ಯ ಸರ್ಕಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರ ಮಾಡಿಕೊಂಡಿತ್ತು. ಬಳಿಕ ಮಸೂದೆಯ ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆದರೆ, ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಇದರಿಂದ ಡಿ ಕೆ ಶಿವಕುಮಾರ್‌ ಅವರಿಗೆ ಸದ್ಯಕ್ಕೆ ಹಿನ್ನಡೆಯಾಗಿದ್ದು, ರಾಜಭವನ ಮತ್ತು ಸರಕಾರದ ನಡುವಿನ ಸಂಘರ್ಷದ ಮತ್ತೊಂದು ಅಧ್ಯಾಯ ಆರಂಭವಾಗುತ್ತದೆಯೇ ಕಾದು ನೋಡಬೇಕು.

Advertisements

ಬೆಂಗಳೂರು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯಾಗುತ್ತಿದ್ದು, ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕು ಎನ್ನುವು ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X