ಉಡುಪಿ | ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ವಿಸ್ತೀರ್ಣಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ – ಡಿಸಿ ವಿದ್ಯಾಕುಮಾರಿ

Date:

Advertisements

ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಗಳನ್ನುನ್ನು ಗುರುತಿಸಲಾಗಿದೆ. ಕೆ.ಐ.ಎ.ಡಿ.ಬಿ ಯವರು ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜನರಿಗೆ ಉದ್ಯೋಗ ದೊರಕಿಸಿಸುವಂತಾಗಬೇಕೆಂದರು.

Advertisements
1004823361


ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ ಹಾಗೂ ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಜಮೀನು ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನ ಭೂ ಮಾಲೀಕರಿಗೆ ಪೂರ್ಣ ಪರಿಹಾರಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆಯು ಬಾಕಿ ಇದೆ. ಈ ಭೂಮಿಯು ಇಕೋ ಸೆನ್ಸಿಟೀವ್ ಝೋನ್‌ನಲ್ಲಿ ಬರುವ ಬಗ್ಗೆ ಪರಿಶೀಲನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದರು.

ಜಿಲ್ಲೆಯ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಪಡೆಯದೇ ಹಾಗೂ ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿ ನೀಡದೇ ಆರ್.ಎಂ.ಸಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಮಾಲೀಕರುಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದರು.
ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಸ್ವಲ್ಪ ಮಟ್ಟದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಮಿಯ್ಯಾರು ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಯೊಂದು ಕೈಗಾರಿಕಾ ಘಟಕಗಳೂ ಮಳೆ ನೀರು ಕೊಯ್ಲು ಅನ್ನು ಅಳವಡಿಸಿಕೊಳ್ಳಬೇಕು. ಇದರಿಂದಾಗಿ ಸ್ಥಳೀಯವಾಗಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 22 ರಫ್ತು ಆಧಾರಿತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಿದೇಶಿ ರಫ್ತನ್ನು ಉತ್ತೇಜಿಸುವುದರೊಂದಿಗೆ ಇನ್ನಷ್ಟು ಹೆಚ್ಚಿಸಬೇಕೆಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕೆ.ಐ.ಎ.ಡಿ.ಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ, ಶಿವಮೊಗ್ಗ ಕೆ.ಎಸ್.ಎಸ್.ಐ.ಡಿ.ಸಿ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ನಾಗಾಭರಣ ಕೆ.ಪಿ, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X