ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೃದಯ ಭಾಗವಾದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಪ್ರೊ.ಲೀಲಾ ನಾಯರ್ ಮಂಗಳವಾರ ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮುಳಬಾಗಿಲಿನಲ್ಲಿ ಉಪನ್ಯಾಸಕ ವೃತ್ತಿ ಆರಂಭಿಸಿದ್ದ ಲೀಲಾ ನಾಯರ್ ಅವರು, 1990ರಲ್ಲಿ ಮಂಗಳೂರು ವಿ.ವಿ.ಕಾಲೇಜಿಗೆ (ಆಗಿನ ಸರಕಾರಿ ಕಾಲೇಜು) ಇಂಗ್ಲಿಷ್ ಉಪನ್ಯಾಸಕಿಯಾಗಿ ಸೇರ್ಪಡೆಯಾಗಿದ್ದರು.
ಸುದೀರ್ಘ 24 ವರ್ಷ ಕರ್ತವ್ಯ ನಿರ್ವಹಿಸಿದ್ದ ಅವರು, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾಗಿ 2014ರಲ್ಲಿ ಸೇವಾ ನಿವೃತ್ತಿ ಹೊಂದಿದ್ದರು.
ಮೃತರು ಪತಿ, ಇಬ್ಬರು ಪುತ್ರಿಯರ ಸಹಿತ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಂಗಳೂರಿನಲ್ಲಿ ನಡೆಯಿತು. ಲೀಲಾ ನಾಯರ್ ಅವರ ನಿಧನಕ್ಕೆ ಮಂಗಳೂರು ವಿವಿ ಕಾಲೇಜು ಆಡಳಿತ ಮಂಡಳಿ, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
