ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಸೋನಿ ಸಂತೋಷ ಬನವಾಸೆ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಮೊಬೈಲ್ ಹೆಚ್ಚು ಬಳಸಬೇಡಾ ಬುದ್ಧಿವಾದ ಹೇಳಿದ್ದರು. ಇದೇ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಕೋಣೆಯಲ್ಲಿ ಒಬ್ಬಳೇ ಇದ್ದ ವೇಳೆ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಮೃತ ಬಾಲಕಿಯ ತಂದೆ ಸಂತೋಷ ಬನವಾಸೆ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.