ಯಾದಗಿರಿ | ಬೀದರ್‌ ಮಾದರಿಯಂತೆ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಆಗ್ರಹ

Date:

Advertisements

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಏಜೆನ್ಸಿಗಳಿಂದ ಆಗುತ್ತಿರುವ ಅಕ್ರಮಗಳು ಹಾಗೂ ಅನ್ಯಾಯಗಳನ್ನು ತಡೆಗಟ್ಟಲು ಬೀದರ್ ಮಾದರಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸಬೇಕೆಂದು ಆಗ್ರಹಿಸಲಾಯಿತು.

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ(ರಿ) ಯಾದಗಿರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಾರ್ಮಿಕ ಸಚಿವರು ಹಾಗೂ ರಾಜ್ಯ ಸರಕಾರವು ಈ ಹೊರಗುತ್ತಿಗೆ ಏಜೆನ್ಸಿಗಳ ಬದಲಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸುವಂತೆ ಸಲಹೆ ನೀಡಿರುತ್ತಾರೆ. ಅದರಂತೆ ಈಗಾಗಲೇ ದಾವಣಗೆರೆ, ಬಳ್ಳಾರಿ, ಮೈಸೂರು, ಕೊಪ್ಪಳ ಜಿಲ್ಲೆ ಸೇರಿದಂತೆ ಹಲವೆಡೆ ರಚಿಸಲಾಗಿದ್ದು, ಅದೇ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬೀದರ್ ಮಾದರಿಯ ‘ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ’ ರಚಿಸಬೇಕೆಂದು ತಿಳಿಸಿದರು.

Advertisements

ʼಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿಶಾಲೆ, ಕಾಲೇಜುಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವಚ್ಛತೆ ಮತ್ತು ಜವಾನ ಸೇರಿ ಹುದ್ದೆಗಳಲ್ಲಿ ಹೊರಗುತ್ತಿಗೆ ಮೂಲಕ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುವ ನೂರಾರು ಕಾರ್ಮಿಕರಿಗೆ ಈ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ ಪಿಎಫ್, ಇಎಸ್‌ಐ, ನೇಮಕಾತಿ ಪತ್ರ, ಗುರುತಿನ ಚೀಟಿ, ವೇತನ ಚೀಟಿ, ರಜೆ ಸೌಲಭ್ಯಗಳು ಕಾಲಕಾಲಕ್ಕೆ ಸರಿಯಾಗಿ ದೊರಕುತ್ತಿಲ್ಲʼ ಎಂದರು.

ʼಗುತ್ತಿಗೆದಾರರು ಕಾರ್ಮಿಕರಿಗೆ ವೇತನ, ಪಿಎಫ್, ಇಎಸ್‌ಐ ಕೊಡುವುದರಲ್ಲಿ ವಂಚನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ಸಲ ಸರ್ಕಾರದ ಗಮನಕ್ಕೆ ತಂದಾಗಲು ಸಮಸ್ಯೆ ಬಗೆ ಹರಿದಿಲ್ಲ. ಅಲ್ಲದೆ ಹೊರಗುತ್ತಿಗೆ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಅನ್ವಯ ನಿಗದಿಯಾದ ಶಾಸನಬದ್ಧ ಸೌಲಭ್ಯಗಳನ್ನು ಸಹಿತ ನೀಡುತ್ತಿಲ್ಲʼ ಎಂದು ದೂರಿದರು.

ಹೊರಗುತ್ತಿಗೆ ಕಾರ್ಮಿಕರಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ರಚಿಸಬೇಕೆಂದು ಆಗ್ರಹಿಸಿದರು. ʼಈ ಸಂಬಂಧ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದ್ದೇನೆ. ಮಾಹಿತಿ ಪಡೆದ ನಂತರ ಖಂಡಿತ ನಿಯಮನುಸಾರ ಕ್ರಮಕೈಗೊಳ್ಳಲಾಗುವುದು ಎಂದುʼ ಜಿಲ್ಲಾಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ಜಿಲ್ಲಾ ಸಮಿತಿ ಸದಸ್ಯರಾದ ಭೀಮಶಂಕರ್ ನಾಯ್ಕಲ್, ಗಜಾನಂದ ನಟೇಕರ್, ಶ್ರೀಕಾಂತ್ ಚಿಕ್ಕಮೇಟಿ, ಮೋನಮ್ಮ, ಲಾವಣ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X