ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏಪ್ರಿಲ್.2 ರಂದು ಬೆಳಗ್ಗೆ 8 ಗಂಟೆಗೆ ನಗರದ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುಡುತಿನಿ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆ.ವಿರೂಪಾಕ್ಷಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ವಿ.ಜೆ.ಶೋಭಾರಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್‌ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಬಳ್ಳಾರಿ | ಆಶ್ರಯ ಫಲಾನುಭವಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗಳಿಗೆ ಅವಕಾಶ