ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು, ಮಲೆನಾಡಿನ ನಾಲ್ಕು ಜಿಲ್ಲೆಗಳು ಸೇರಿ ಒಟ್ಟು 11 ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.